Home namma chikmagalur ರಾಜ್ಯಸರ್ಕಾರದ ಸರ್ವಾಧಿಕಾರ ಧೋರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ
namma chikmagalurchikamagalurHomeLatest News

ರಾಜ್ಯಸರ್ಕಾರದ ಸರ್ವಾಧಿಕಾರ ಧೋರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಬಡವರ ಆಶ್ರಯ ಮನೆಗಳು ನೀಡುವಲ್ಲಿ ರಾಜ್ಯಸರ್ಕಾರ ವಿಫಲ ಹಾ ಗೂ ಅರ್ಹ ಫಲಾನುಭವಿಗಳ ವೃದ್ದಾಪ್ಯ ವೇತನ ಕಾರ್ಡ್ ರದ್ದು ಮಾಡಿರುವುದನ್ನು ಖಂಡಿಸಿ ಬಿಜೆಪಿ ನಗರ ಮಂಡಲದಿಂದ ಶನಿವಾರ ಕಾರ್ಯಕರ್ತರು ನಗರಸಭಾ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ಕುರಿತು ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್ ಮಾತನಾಡಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವ? ಕಳೆದರೂ ದೀನದಲಿತರು, ಬಡವರು ಹಾಗೂ ರೈತ ವಿರೋಧಿ ನೀತಿ ಆಡಳಿತವನ್ನು ನೀಡುವ ಮೂಲಕ ಸರ್ವಾಧಿಕಾರಿ ಧೋರಣೆ ನೀತಿ ಅನುಸರಿಸುತ್ತಿದೆ ಎಂದರು.

ರಾಜ್ಯದ ಜನತೆ ದಿನನಿತ್ಯ ಬಳಸುವ ವಸ್ತುಗಳನ್ನು ಬೆಲೆ ಏರಿಸುವುದರ ಮೂಲಕ ಗಾಯದ ಮೇಲೆ ಮ ತ್ತೊಂದು ಬರೆ ಎಳೆಯುತ್ತಿದೆ. ಪೆಟ್ರೋಲ್, ಡೀಸೆಲ್, ಪಹಣಿ, ಛಾಪಾಕಾಗದ, ಕಂದಾಯ ಮುದ್ರಾಂಕ ಶುಲ್ಕ, ಆಹಾರ ಪದಾರ್ಥಗಳ ಏರಿಕೆಯಿಂದ ಬಡ ಹಾಗೂ ಮಧ್ಯಮವರ್ಗದ ಕುಟುಂಬಗಳು ಜೀವನವೇ ಕಷ್ಟ ವಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಹಿಂದಿನ ಶಾಸಕರ ಆಡಳಿತ ಅವಧಿಯಲ್ಲಿ ಆಶ್ರಯ ಯೋಜನೆ, ಅಂಬೇಡ್ಕರ್ ಅವಾಸ್ ಯೋ ಜನೆ, ಪಿಎಂ ಆವಾಜ್ ಯೋಜನೆ, ಕೊಳಚೆ ನಿರ್ಮೂಲನಾ ಮಂಡಳಿಗಳಿಂದ ಕೈಗೊಂಡ ಯೋಜನೆಗಳು ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಸಂಪೂರ್ಣ ನೆನೆಗುದಿಗೆ ಬಿದ್ದಿವೆ ಎಂದು ಆರೋಪಿದರು.

ನಗರಸಭೆ ವ್ಯಾಪ್ತಿಯಲ್ಲಿ ಬಡತನ ರೇಖೆ ಕೆಳಗಿರುವ ಅರ್ಹ ಫಲಾನುಭವಿಗಳಿಗೆ ಆಶ್ರಯ, ಅಂಬೇಡ್ಕರ್ ಆವಾಜ್‌ಯೋಜನೆಗಳಡಿ ಮನೆಗಳನ್ನು ಮಂಜೂರು ಮಾಡುವುದರ ಜೊತೆಗೆ ಇದಕ್ಕೆ ಅನುಗುಣವಾಗಿ ಅನುದಾನ ಬಿಡುಗಡೆಗೊಳಿಸಬೇಕು. ೭೦ ವರ್ಷ ಮೇಲ್ಪಟ್ಟ ಎಲ್ಲಾ ವರ್ಗದವರಿಗೂ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆ ಜಾರಿಗೊಳಿಸಬೇಕು ಎಂದರು.

ಪ್ರಸ್ತುತ ಸಂಧ್ಯಾ ಸುರಕ್ಷಾ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಜಿಲ್ಲೆಯ ೪೬ ಸಾವಿರಕ್ಕೂ ಅಧಿಕ ಅರ್ಹ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಪಡಿಸಿರುವುದು ಖಂಡನೀಯ. ಕೂಡಲೇ ರದ್ದತಿ ಹಿಂ ಪಡೆಯಬೇಕು. ೯೪ಸಿ ಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು ಎಂದರು.

ವಿವಿಧ ಫಲಾನುಭವಿಗಳು ಮಾತನಾಡಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನೀಡಿದ ಮನೆಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ನೀಡದಿರುವ ಕಾರಣ ಕೆಲಸ ಪ್ರಾರಂಭಿಸಿಲ್ಲ. ಅಕ್ಕಿ, ರಾಗಿ ಉಚಿತವಾಗಿ ವಿತರಿಸುತ್ತಿದೆ. ಆದರೆ ಆಹಾರ ಪದಾರ್ಥಗಳ ಬೆಲೆಗಳು ಹೆಚ್ಚಳಗೊಂಡಿದ್ದು ಇದರಿಂದ ಬಡವರ ಕುಟುಂಬವು ಕಂಗಾಲಾ ಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಎಂ. ಕೌಶಿಕ್, ನಗರಸಭೆ ಮಾಜಿ ಅಧ್ಯಕ್ಷರಾದ ಸುಜಾತ ಶಿವಕುಮಾರ್, ಮುತ್ತಯ್ಯ, ನಗರಸಭೆ ಉಪಾಧ್ಯಕ್ಷೆ ಅನುಮಧುಕರ್, ಸದಸ್ಯರಾದ ದೀಪ ರವಿಕು ಮಾರ್, ರೂಪಾಕುಮಾರ್, ಲಲಿತಾ ಬಾಯಿ, ಅಮೃತೇಶ್, ಮಣಿ, ರಾಜು, ಜಿಲ್ಲಾ ಬಿಜೆಪಿ ಮಹಿಳಾ ಮೋ ರ್ಚಾ ಅಧಕ್ಷೆ ಜಸಂತಾ ಅನಿಲಕುಮಾರ್, ಪವಿತ್ರ, ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ವೆಂಕಟೇಶ್, ಯು ವ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋ? ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸಚಿನ್ ಇದ್ದರು.

BJP protests against the dictatorial attitude of the state government

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು: : ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿ ಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ...

ದೇವನಹಳ್ಳಿ 1,777 ಎಕರೆ ಭೂ ಸ್ವಾಧೀನ ನೋಟಿಫಿಕೇಶನ್ ರದ್ದು

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಸುತ್ತಮುತ್ತಲಿನ ಒಟ್ಟ 13 ಹಳ್ಳಿಗಳ 1,777 ಎಕರೆ ಭೂ ಸ್ವಾಧೀನ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ರೈತರು,...

Related Articles

ರೈತ ಸಂಘಟನೆ ದಾರಿ ಬಿಟ್ಟಿತು ? ಎಲ್ಲಿಗೆ ಪಯಣ ಯಾವುದೋ ದಾರಿ !

ಮಾಸದಿರಲಿ ಬದಲಾಯಿಸದಿರಲಿ ರೈತರ ಹೆಗಲ ಮೇಲೇರಿರುವ ಶಾಲಿನ ಹಸಿರು ಬಣ್ಣ. ದೇಶಕ್ಕೆ ಅನ್ನ ಕೊಡುವ ರೈತ...

ದೇಶಭಕ್ತಿಯ ಪ್ರತೀಕ ಮಹಾರಾಣಾ ಪ್ರತಾಪ್‌ಸಿಂಗ್

ಚಿಕ್ಕಮಗಳೂರು:  ಪರಾಕ್ರಮ-ಆದರ್ಶ ದೇಶಭಕ್ತಿಯ ಪ್ರತೀಕ ಮಹಾರಾಣಾ ಪ್ರತಾಪಸಿಂಗ್ ಎಂದು ಕರ್ನಾಟಕ ರಜಪೂತ ಮಹಾಸಭಾ ನಿರ್ದೇಶಕ ಬೆಂಗಳೂರಿನ...

ದತ್ತು ಸಂಸ್ಥೆಯ ಸಿಬ್ಬಂದಿ ಆಯಾ ಅಮಾನತು

ಚಿಕ್ಕಮಗಳೂರು: ನಗರದ ದತ್ತು ಸಂಸ್ಥೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗು ಸುಟ್ಟ...

ವೈದ್ಯ ಇಲ್ಲದ ಕಳಸ ತಾಲೂಕು ಆಸ್ಪತ್ರೆ

ಚಿಕ್ಕಮಗಳೂರು: ಕಳಸ ತಾಲೂಕು ಆಸ್ಪತ್ರೆಯಲ್ಲಿ ಓರ್ವ ವೈದ್ಯರೂ ಇಲ್ಲದೆ ಜನರು ಚಿಕಿತ್ಸೆಗೆ ಪರದಾಡುವಂತಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರು...