Home Latest News ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರ ಬಂಧನ – ಪೊಲೀಸ್‌ ಠಾಣೆ ಎದುರು ಪ್ರತಿಭಟನೆ
Latest NewschikamagalurHomenamma chikmagalur

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರ ಬಂಧನ – ಪೊಲೀಸ್‌ ಠಾಣೆ ಎದುರು ಪ್ರತಿಭಟನೆ

Share
Share

ಚಿಕ್ಕಮಗಳೂರು: ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರನ್ನು ಟೀಕಿಸಿರುವ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೌನ್‌ ಪೊಲೀಸ್‌ ಠಾಣೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಅವರನ್ನು ಬಂಧಿಸಿರುವ ಪೋಲಿಸರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಧೀಶರ ಎದುರು ಹಾಜರು ಪಡಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಯಿತು.

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿರುವುದನ್ನು ಖಂಡಿಸಿ ಮಂಗಳವಾರ ಚಿಕ್ಕಮಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಈ ವೇಳೆಯಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಅವರು ಭಾಷಣ ಮಾಡುವ ವೇಳೆಯಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆಂದು ವಕೀಲರ ಅನಿಲ್‌ಕುಮಾರ್‌ ಅವರು ನೀಡಿರುವ ದೂರಿನನ್ವಯ ಟೌನ್‌ ಪೊಲೀಸರು ಸಂತೋಷ್‌ ಕೋಟ್ಯಾನ್‌ ಅವರನ್ನು ವಶಕ್ಕೆ ಪಡೆದುಕೊಂಡರು.

ಈ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೌನ್‌ ಪೊಲೀಸ್‌ ಠಾಣೆ ಎದುರು ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ನಂತರದಲ್ಲಿ ಸಂತೋಷ್ ಕೋಟ್ಯಾನ್‌ ಅವರನ್ನು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಯಲ್ಲಿ ಪೊಲೀಸರ ಜೀಪನ್ನು ತಡೆಯುವ ಪ್ರಯತ್ನ ಕೂಡ ನಡೆಯಿತು.

ಎಷ್ಟೇ ತಡೆವೊಡ್ಡಿದರೂ ಪೊಲೀಸರು ತಮ್ಮ ಕೆಲಸವನ್ನು ಮುಂದುವರೆಸಿದರು. ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಂಗ ವಶಕ್ಕೆ ನೀಡಿದರು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

BJP Yuva Morcha district president arrested – Protest in front of police station

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು

ಚಿಕ್ಕಮಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4×100 ಮೀಟರ್ ರಿಲೇ...

ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಅತಿರೇಕದ...

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ...