Home namma chikmagalur chikamagalur ಬೆಲೆಏರಿಕೆ ಖಂಡಿಸಿ ನಗರದಲ್ಲಿ ಬ್ಲಾಕ್‌ಕಾಂಗ್ರೆಸ್ ವಿನೂತನ ಪ್ರತಿಭಟನೆ
chikamagalurHomeLatest Newsnamma chikmagalur

ಬೆಲೆಏರಿಕೆ ಖಂಡಿಸಿ ನಗರದಲ್ಲಿ ಬ್ಲಾಕ್‌ಕಾಂಗ್ರೆಸ್ ವಿನೂತನ ಪ್ರತಿಭಟನೆ

Share
Share

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರು ಹಾಗೂ ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ನಗರದ ಪ್ರಮುಖ ಬೀದಿಗಳಲ್ಲಿ ಎತ್ತಿ ಗಾಡಿಯಲ್ಲಿ ಸಂಚರಿಸಿ, ಕಾರನ್ನು ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ತಾಲ್ಲೂಕು ಕಛೇರಿಯಿಂದ ಎತ್ತಿನ ಗಾಡಿಯಲ್ಲಿ ಮುಖಂಡರು, ಕಾರ್ಯಕರ್ತರೊಂದಿಗೆ ನಿಂತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಸಾಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರನ್ನು ಹಗ್ಗದಲ್ಲಿ ಕಟ್ಟಿ ಎಳೆದುಕೊಂಡು ನಗರದ ಆಜಾದ್ ವೃತ್ತದ ವರೆಗೂ ಎಳೆದು ಆಕ್ರೋಶ ವ್ಯಕ್ತ ಪಡಿಸಿದರು.

ಆಜಾದ್ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರನ್ನುದ್ದೇಶಿಸಿ ಶಾಸಕ ಹೆಚ್.ಡಿ. ತಮ್ಮಯ್ಯ ಮಾತನಾಡಿ ೨೦೧೪ರಲ್ಲಿ ಕೇಂದ್ರ ಸರ್ಕಾರದ ಚುಕ್ಕಾಣಿ ಹಿಡಿದ ಎನ್ ಡಿಎ ಮೈತ್ರಿ ಕೂಟದ ನರೇಂದ್ರ ಮೋದಿ ಇಡೀ ದೇಶದ ಜನರಿಗೆ ಅಚ್ಚೆದಿನ್ ಬರಲಿದೆ ಎಂಬ ಭರವಸೆ ನೀಡಿದರು. ಅವರು ಹೇಳಿದ್ದು ಅಚ್ಚೆದಿನ್ ದೇಶದ ಜನರಿಗಲ್ಲ. ಗುಜರಾತಿನ ಅದಾನಿ, ಅಂಬಾನಿ, ನೀರವ್ ಮೋದಿ, ಲಲಿತ್ ಮೋದಿ, ಶಾ ರವರಿಗೆ ಬರುತ್ತದೆ ಎಂದು ಹೇಳಿದ್ದರು. ಆದರೆ ಜನ ಅದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆಂದು ಲೇವಡಿ ಮಾಡಿದರು.

ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಚಿನ್ನ-ಬೆಳ್ಳಿ ಸೇರಿದಂತೆ ಎಲ್ಲಾ ಅಡುಗೆ ಎಣ್ಣೆ, ಬೇಳೆ ಕಾಳುಗಳು ಸೇರಿದಂತೆ ಗೃಹೋಪಯೋಗಿ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಜನಸಾಮಾನ್ಯರ ಜೀವನವನ್ನು ದುಸ್ಥರ ಗೊಳಿಸಿದ ಕೀರ್ತಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ದೇಶದ ಜನರಿಗೆ ಬೆಲೆ ಏರಿಕೆಯ ಬಿಸಿಯನ್ನು ಕೇಂದ್ರ ಸರ್ಕಾರ ಮುಟ್ಟಿಸಿದೆ. ೨೦೨೪ ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ೪೦೦ ಸ್ಥಾನ ಪಡೆಯುತ್ತೇವೆ ಎಂದು ಹೇಳಿದ್ದರು ಅದು ಸಾಧ್ಯವಾಗಲಿಲ್ಲ, ಕಾರಣ ಇವರುಗಳು ಮಾತಿನಲ್ಲಿಯೇ ಮನೆ ಕಟ್ಟುತ್ತಾರೆ ಎಂಬುದು ಜನರಿಗೆ ಅರ್ಥವಾಗಿದೆ. ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಹೇಳಿದರು.

೨೦೧೪ ರಿಂದ ೧೮ ಪರ್ಸೆಂಟ್ ಜಿಎಸ್‌ಟಿ ಹಾಕಿದರು, ೧೧ ವರ್ಷ ಜಿಎಸ್‌ಟಿ ಅನ್ನು ಸಂಗ್ರಹ ಮಾಡಿದರು. ಜಿಎಸ್‌ಟಿ ಯನ್ನು ಅತಿ ಹೆಚ್ಚು ಕಟ್ಟುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಪಂಚ ರಾಜ್ಯಗಳ ಚುನಾವಣೆ ಇರುವುದರಿಂದ ಜಿಎಸ್‌ಟಿಯನ್ನು ಕಡಿಮೆ ಮಾಡಿದರು ಎಂದರು.

ನಮ್ಮ ಸರ್ಕಾರ ಪಂಚ ಗ್ಯಾರಂಟಿ ಕೊಟ್ಟಿದ್ದರಿಂದ ಕುಟುಂಬಗಳ ತಲಾ ಆದಾಯ ೨,೧೮,೦೦೦ ರು. ಆಗಿದೆ. ಇದರ ಉದ್ದೇಶ ಸಮ ಸಮಾಜ ನಿರ್ಮಾಣ ಮಾಡುವುದು ೧೨ನೇ ಶತಮಾನದಲ್ಲಿ ಶ್ರೀ ಬಸವಣ್ಣನವರು, ೧೯ನೇ ಶತಮಾನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರ ಧಾರೆಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದನ್ನು ತಿಳಿಸಬೇಕು. ಎಸ್‌ಐಆರ್ ಭೂತ ಕರ್ನಾಟಕಕ್ಕೆ ಬರಬಾರದು ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ದೇವರಾಜ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ನೀಡಿದ ಪಂಚ ಗ್ಯಾರಂಟಿಗಳನ್ನು ಬಿಜೆಪಿಯವರು ಕಾಂಗ್ರಸ್ ಗ್ಯಾರಂಟಿ ನೀಡುವ ಮೂಲಕ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ ಎಂದು ಟೀಕಿಸಿದ್ದರು. ಆದರೆ ನಮ್ಮ ರಾಜ್ಯದ ಗ್ಯಾರಂಟಿ ಮಾದರಿಯನ್ನು ಬಿಜೆಪಿ ಅಧಿಕಾರದಲ್ಲಿರುವ ದೇಶದ ವಿವಿಧ ರಾಜ್ಯಗಳಲ್ಲಿ ನಕಲು ಮಾಡಿ ಅನುಷ್ಟಾನಗೊಳಿಸುತ್ತಿದ್ದಾರೆ ಎಂದು ಕುಹಕವಾಡಿದರು.

ಇಂಧನ ದರ ಏರಿಕೆಯಾಗಿರುವುದರಿಂದ ಹೊಟೆಲ್ ಮಾಲೀಕರೂ ಸೇರಿದಂತೆ ಜನಸಾಮಾನ್ಯರಿಗೆ ಹೊರೆಯಾಗಿ ಆ ಹೊರೆಯನ್ನು ಗ್ರಾಹಕರ ಮೇಲೆ ಹೇರಲಾಗುತ್ತಿದೆ. ಗೊಬ್ಬರ ಬಿತ್ತನೆ ಬೀಜದ ಬೆಲೆ ಏರಿಸಿ ರೈತರನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇವರ ಜನವಿರೋಧಿ ನೀತಿಗಳಿಂದ ಮಹಿಳೆಯರು, ಕಾರ್ಮಿಕರು, ಯುವಜನತೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರಸ್ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ಮಂಜೇಗೌಡ ಮಾತನಾಡಿ ಕೇಂದ್ರ ಸರ್ಕಾರದ ಮುಖಂಡರ ಅನುಭವವದ ಕೊರತೆಯಿಂದ ಇಂಧನ ಬೆಲೆ, ಗೊಬ್ಬರದ ಬೆಲೆ ಏರಿಕೆಯಾಗಿದೆ. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡಿ ನೆರವಾಗದ ಸರ್ಕಾರ ರೈತವಿರೋದಿಯಾಗಿ ವರ್ತಿಸುತ್ತಿದೆ. ಬ್ರಿಟೀಷರು ದೇಶದ ಸಂಪತ್ತನ್ನು ದೆಚಿಕೊಂಡುಹೋಗಿ ದಿವಾಳಿಯಾಗಿದ್ದ ಸಂದರ್ಭದಲ್ಲಿ ಅಂದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ೨೦ ಅಂಶಗಳ ಕಾರ್ಯಕ್ರಮ ನೀಡಿ ಜನರ ರಕ್ಷಣೆ ಮಾಡಿತ್ತು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಜನವಿರೋದಿ ನೀತಿ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಜನಜಾಗೃತಿ ಮೂಡಿಸಿ ಮತ್ತೊಮ್ಮೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ತರಲಿದ್ದೇವೆಂದು ಹೇಳಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಬಿ.ಹೆಚ್. ಹರೀಶ್, ಹಿರೇಮಗಳೂರು ರಾಮಚಂದ್ರ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲೇಶ್ ಸ್ವಾಮಿ, ಸಿಡಿಎ ಮಾಜಿ ಅಧ್ಯಕ್ಷ ನಯಾಜ್ ಅಹಮದ್, ಹುಣಸೆಮಕ್ಕಿ ಲಕ್ಷ್ಮಣ್, ಕೆ. ಭರತ, ತನೋಜ್ ನಾಯ್ಡು, ಯುವ ಕಾಂಗ್ರೆಸ್ ಮುಖಂಡರಾದ ಲಾಕೇಶ್, ಅಭಿ, ಹೇಮಂತ್, ಸುಮಂತ್ ಇದ್ದರು,

Black Congress holds fresh protest in city against price hike

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...