Home namma chikmagalur chikamagalur 30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್
chikamagalurCrime NewsHomeLatest Newsnamma chikmagalur

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

Share
Share

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ.

ಒಂದು ವೇಳೆ ಹಣ ನೀಡದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು. ಗೃಹಿಣಿ ಹಣ ನೀಡಲು ನಿರಾಕರಿಸಿದಾಗ, ವಿಕೃತ ಮನಸ್ಸಿನ ಕಿರಾತಕರು ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆಯನ್ನು ತೆರೆದು ಆ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಗೃಹಿಣಿಯ ಫೋಟೋ ಹಾಕಿ “ಇವರು 300 ರೂಪಾಯಿಗೆ ಲಭ್ಯವಿದ್ದಾರೆ” ಎಂಬ ಅತ್ಯಂತ ಅವಹೇಳನಕಾರಿ ಸಂದೇಶವನ್ನು ಬರೆದು ಅವರ ಮಾನಹಾನಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಈ ಅಶ್ಲೀಲ ಫೋಟೋಗಳನ್ನು ನೋಡಿ ತೀವ್ರ ಮಾನಸಿಕ ಆಘಾತಕ್ಕೊಳಗಾದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಇಡೀ ಕೃತ್ಯದ ಹಿಂದೆ ಅದೇ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಅಕ್ಷಯ್ ಮತ್ತು ಸಾಹುಲ್ ಹಮೀದ್ ಎಂಬ ಇಬ್ಬರು ಯುವಕರ ಕೈವಾಡವಿದೆ ಎಂದು ಶಂಕಿಸಲಾಗಿದೆ. ಈ ಇಬ್ಬರು ಆರೋಪಿಗಳು ಈ ಹಿಂದೆ ಕೂಡ ಇದೇ ರೀತಿ ಬೇರೆ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಘಟನೆಯಿಂದ ಆಕ್ರೋಶಗೊಂಡ ಗೃಹಿಣಿಯ ಪತಿ, ಆರೋಪಿಗಳ ಮೊಬೈಲ್ ಸಂಖ್ಯೆ ಸಮೇತ ಲಕ್ಕವಳ್ಳಿ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಫೋಟೋ ವೈರಲ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆಯ ಕುಟುಂಬ ಒತ್ತಾಯಿಸಿದೆ. ಸದ್ಯ ಲಕ್ಕವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಇಬ್ಬರು ಕಿಡಿಗೇಡಿಗಳ ಬಂಧನಕ್ಕಾಗಿ ತೀವ್ರ ಜಾಲ ಬೀಸಿದ್ದಾರೆ.‌

Blackmailed to pay Rs 30 lakh

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...