Home Crime News ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ
Crime NewsHomeLatest Newsnamma chikmagalurTarikere

ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ

Share
Share

ತರೀಕೆರೆ: ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆನಂದ್ (48) ಹಾಗೂ ಜುಂಜಾನಾಯ್ (65) ಎಂದು ಗುರುತಿಸಲಾಗಿದೆ.

ಅಮೃತಾಪುರ ಗ್ರಾಮದ ಮುರುಗೇಶ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಅಡಿಕೆ ಸುಲಿಯುವ ಕೆಲಸಕ್ಕಾಗಿ ಸೋಮವಾರ ಬೆಳಗ್ಗೆ ಇಬ್ಬರೂ ಕಾರ್ಮಿಕರು ತೆರಳಿದ್ದರು. ಆದರೆ, ಕೆಲ ಸಮಯದ ಬಳಿಕ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿರುವುದು ಗ್ರಾಮದಲ್ಲಿ ಆತಂಕ ಹಾಗೂ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೆಲಸಕ್ಕೆ ತೆರಳಿದ್ದ ಇಬ್ಬರೂ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದಾರೆಯೇ? ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಇದರ ಹಿಂದೆ ಯಾವುದಾದರೂ ದುಷ್ಕೃತ್ಯ ಅಡಗಿದೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ತರೀಕೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇಬ್ಬರು ಕಾರ್ಮಿಕರ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆ ಹಾಗೂ ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ.

Bodies of two workers found in a water tank in an areca nut plantation

Share

Leave a comment

Leave a Reply

Your email address will not be published. Required fields are marked *

Don't Miss

ಮೊಬೈಲ್‌ಗೆ 300 ಸಂದೇಶ-ಖಾತೆಯಿಂದ ₹1.49 ಲಕ್ಷ ವಂಚನೆ

ಚಿಕ್ಕಮಗಳೂರು: ಮೊಬೈಲ್‌ಗೆ ಏಕಾಏಕಿ 300 ಸಂದೇಶಗಳು ಬಂದ ಬೆನ್ನಲ್ಲೇ ವ್ಯಕ್ತಿಯೊಬ್ಬರ ಕೆನರಾ ಬ್ಯಾಂಕ್ ಖಾತೆಯಿಂದ ₹1.49 ಲಕ್ಷ ಹಣವನ್ನು ಯುಪಿಐ ಮೂಲಕ ಅಪರಿಚಿತರು ವರ್ಗಾಯಿಸಿಕೊಂಡಿದ್ದಾರೆ. ಸೋಮಲಾಪುರ ಕಾಚಗಲ್ ಕೊಪ್ಪದ ನಾಗರಾಜ್ ಎಸ್....

ಮನೆ ಬೀಗ ಮುರಿದು ₹5.55 ಲಕ್ಷ ಮೌಲ್ಯದ ಚಿನ್ನ-ಆಭರಣ ಕಳವು

ಚಿಕ್ಕಮಗಳೂರು: ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ₹5.55 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ನಗರದ...

Related Articles

ಅನಂತ್ ಅಗಲಿಕೆ ವೈಯಕ್ತಿಕವಾಗಿ ಅಪಾರ ನೋವು ತಂದಿದೆ

ಮೂಡಿಗೆರೆ: ತಾವು ಸಚಿವೆಯಾಗಿದ್ದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದ ಎಂ.ಎಸ್. ಅನಂತ್ ಅವರು...

ಬಸ್ ಹತ್ತುವ ಮಹಿಳೆಯ 5 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ಬಸ್ ಹತ್ತುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲನ್ನೇ ದುರುಪಯೋಗಪಡಿಸಿಕೊಂಡ ಕಳ್ಳರು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 5...

ಮಹಿಳೆಯ ಕುತ್ತಿಗೆಯಿಂದ 6 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

ಚಿಕ್ಕಮಗಳೂರು: ರಾತ್ರಿ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನದ...

ರೈತರ ಪರಿಶ್ರಮದಿಂದ ನಮ್ಮೆಲ್ಲರ ಬದುಕು ಸಾಗುತ್ತಿದೆ

ಚಿಕ್ಕಮಗಳೂರು : ರೈತರಿಗೆ ಜಾತಿ, ಧರ್ಮ, ಪಕ್ಷದ ಬೇಧವಿಲ್ಲ. ರೈತ ಎಂದರೆ ರೈತ ಮಾತ್ರ. ರೈತ...