Home namma chikmagalur ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ದೇವಗೊಂಡನಹಳ್ಳಿ ರೈತನ ಶವ ಪತ್ತೆ
namma chikmagalurchikamagalurCrime NewsLatest News

ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ದೇವಗೊಂಡನಹಳ್ಳಿ ರೈತನ ಶವ ಪತ್ತೆ

Share
Share

ಚಿಕ್ಕಮಗಳೂರು:  ಜಿಲ್ಲೆಯ ಮಲೆನಾಡು-ಬಯಲುಸೀಮೆಯಲ್ಲಿ ಮುಂದುವರಿದ ಮಳೆ ಅಬ್ಬರ, ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದ ರೈತಾಪಿ ವರ್ಗದವರು ಕಂಗಾಲಾಗಿದ್ದಾರೆ.

ಮಲೆನಾಡಿನಲ್ಲಿ ಕಾಫಿ, ಅಡಿಕೆ ಕೊಯ್ಲಿಗೆ ಬಂದಿದ್ದು, ಮಳೆಯಿಂದಾಗಿ ಬೆಳೆಗಳು ನೆಲ ಸೇರುತ್ತಿವೆ. ಕೊಯ್ದು ಕಾರ್ಯಕ್ಕೆ ಅಡ್ಡಿಯಾಗಿದೆ. ಅತ್ತ ಬಯಲು ಪ್ರದೇಶದಲ್ಲಿ ರೈತರು ಬೆಳೆದ ಆಹಾರದಾನ್ಯಗಳು ಮತ್ತು ತರಕಾರಿ ಬೆಳೆಗಳು ಮಳೆಯಿಂದ ಕೊಳೆತು ಹೋಗುತ್ತಿವೆ.

ಮಳೆಯಿಂದ ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಬಿದ್ದು ರೈತರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ದೇವಗೊಂಡನಹಳ್ಳಿ ಎಂಬಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ.

ಹೊಲದಲ್ಲಿ ಎಮ್ಮೆ ಮೇಯಿಸಲು ತೆರಳಿದ್ದ ರೈತರೊಬ್ಬರು ಹಳ್ಳದಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ದೇವಗೊಂಡನಹಳ್ಳಿ ಗ್ರಾಮದ ರೈತ ಲಕ್ಷ್ಮಣ್ ಗೌಡ (45) ಮೃತ ದುರ್ದೈವಿ.

ಮಂಗಳವಾರ ಸಂಜೆಯಿಂದ ನಾಪತ್ತೆಯಾಗಿದ್ದ ಲಕ್ಷ್ಮಣಗೌಡ ಅವರ ಮೃತದೇಹ ಬುಧವಾರ ಪತ್ತೆಯಾಗಿದೆ. ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಬುಧವಾರ ರಾತ್ರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಹಲವು ಕಡೆಗಳಲ್ಲಿ ಅನಾಹುತ ಸಂಭವಿಸಿದೆ. ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ನಿರಂತರ ಮಳೆಯಿಂದ ರೈಲ್ವೇ ಹಳಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.

ರೈಲ್ವೆ ಹಳಿಯ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿ ಬೇಸ್ ಗಳು ಲಯತಪ್ಪಿದ್ದವು., ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ, ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಪ್ಯಾಸೆಂಜರ್ ರೈಲು ಕಣಿವೆ ರೈಲ್ವೆ ಸ್ಟೇಷನ್‌ ಸಿಬ್ಬಂದಿಗಳಿಂದ ರೈಲು ಚಾಲಕನಿಗೆ ಮಾಹಿತಿ ನೀಡಿದ್ದು, ಚಲಿಸುತ್ತಿದ್ದ ರೈಲನ್ನ ತಕ್ಷಣವೇ ನಿಲ್ಲಿಸಿದ ಚಾಲಕ, ಹಳಿ ದುರಸ್ಥಿ ಪಡಿಸಿದ ಸಿಬ್ಬಂದಿಗಳು, 30 ನಿಮಿಷ ನಿಂತಲ್ಲೇ ನಿಂತ ರೈಲು ನಂತರ ತನ್ನ ಪ್ರಯಾಣ ಮುಂದುವರಿಸಿದೆ.

Body of Devagondanahalli farmer found in overflowing canal

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...