Home namma chikmagalur chikamagalur ಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ
chikamagalurCrime NewsHomeLatest Newsnamma chikmagalur

ಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ

Share
Share

ಚಿಕ್ಕಮಗಳೂರು: ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದೆ.

ಮೂಲತಃ ಕೊಡಗು ಜಿಲ್ಲೆಯ ಅಭಿಷೇಕ್ (27) ಹಾಗೂ ಯೋಗೀಶ್ (17) ಕಳಸದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು.
ಈ ವೇಳೆ ಕಳಸ ತಾಲೂಕಿನ ಬಾಳೆಹೊಳೆ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿ ಭದ್ರಾ ನದಿಯ ಆಳದ ಪರಿಚಯವಿಲ್ಲದ ಕಾರಣ ಇಬ್ಬರೂ ಸಾವನ್ನಪ್ಪಿದ್ದರು.
ಪೊಲೀಸರು ಸಂಜೆವರೆಗೂ ಮೃತ ದೇಹ ಹುಡುಕಿ ಕತ್ತಲಾದ ಮೇಲೆ ಶೋಧ ಕಾರ್ಯ ನಿಲ್ಲಿಸಿದ್ದರು. ಇಂದು ಮತ್ತೆ ಪೊಲೀಸ್ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಇದು ತಜ್ಞರು ಶೋಧ ಕಾರ್ಯ ನಡೆಸಿದಾಗ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.

ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ಅಭಿಷೇಕ್ ಅಕ್ಕ ಕಳಸಾದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು.

ಇಬ್ಬರು ಯುವಕರು ಕಳಸಕ್ಕೆ ಬಂದಾಗ ಈ ದುರ್ಘಟನೆ ಸಂಭವಿಸಿದೆ. ಮೃತ ದೇಹ ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Body of missing youth found in Bhadra river

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...