Home namma chikmagalur chikamagalur ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ನವಜಾತ ಗಂಡು ಶಿಶುವಿನ ಶವ ಪತ್ತೆ
chikamagalurCrime NewsHomeLatest Newsnamma chikmagalur

ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ನವಜಾತ ಗಂಡು ಶಿಶುವಿನ ಶವ ಪತ್ತೆ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು ನಗರದ ಮೂಡಿಗೆರೆ ರಸ್ತೆಯ ಸರ್ಕಾರಿ ಬಸ್ ಡಿಪೋ ಸಮೀಪದ ನಿರ್ಜನ ಪ್ರದೇಶದ ಪೊದೆಯೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಇದು ಸಾರ್ವಜನಿಕರಲ್ಲಿ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಸ್ಥಳೀಯರು ಪೊದೆಯೊಳಗೆ ಅನುಮಾನಾಸ್ಪದವಾಗಿ ಬಿದ್ದಿದ್ದ ಪ್ಲಾಸ್ಟಿಕ್ ಚೀಲವನ್ನು ಗಮನಿಸಿದ ವೇಳೆ ಅದರೊಳಗೆ ಕೇವಲ ಒಂದೇ ದಿನದ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ಮಗು ಸಾವನ್ನಪ್ಪಿದ ಬಳಿಕ ಅಂತ್ಯಸಂಸ್ಕಾರ ನಡೆಸದೆ, ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದು ಮಾನವೀಯತೆ ಮರೆತ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಗು ಆಸ್ಪತ್ರೆಯಲ್ಲಿ ಜನಿಸಿದ್ದಿರಬಹುದೆಂಬ ಅನುಮಾನ ಮೂಡಿದ್ದು, ಜನನದ ಬಳಿಕ ಹೊಕ್ಕಳು ಬಳ್ಳಿಗೆ ಹಾಕುವ ವೈದ್ಯಕೀಯ ಕ್ಲಿಪ್ ಹಾಗೆಯೇ ಇರುವುದನ್ನು ಪತ್ತೆಯಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಅಲ್ಲದೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಮಗುವನ್ನು ಇಲ್ಲಿ ತಂದು ಎಸೆದವರ ಪತ್ತೆಗೆ ಜಾಲ ಬೀಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಮಾಯಕ ನವಜಾತ ಶಿಶುವಿನ ಶವವನ್ನು ಪೊದೆಯೊಳಗೆ ಎಸೆದು ಹೋದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Body of newborn baby boy found stuffed in plastic bag

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...