Home namma chikmagalur chikamagalur ದಂಟರಮಕ್ಕಿ ಕೆರೆಯಲ್ಲಿಅಪರಿಚಿತ ಮಹಿಳೆಯ ಶವ ಪತ್ತೆ
chikamagalurCrime NewsHomeLatest Newsnamma chikmagalur

ದಂಟರಮಕ್ಕಿ ಕೆರೆಯಲ್ಲಿಅಪರಿಚಿತ ಮಹಿಳೆಯ ಶವ ಪತ್ತೆ

Share
Share

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯ ದಂಟರಮಕ್ಕಿ ಕೆರೆಯಲ್ಲಿ ಅಂದಾಜು 60 ರಿಂದ 65 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ನೀಲಿ ಬಣ್ಣದ ಸೀರೆ ಹಾಗೂ ಜಾಕೆಟ್ ಧರಿಸಿದ್ದ ಮಹಿಳೆಯ ಮೃತದೇಹ ಕೆರೆಯಲ್ಲಿ ಮಕಾಡೆಯಾಗಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ನಗರಸಭೆ ಮೇಲ್ವಿಚಾರಕರು ಅಗ್ನಿಶಾಮಕ ದಳದ ನೆರವಿನೊಂದಿಗೆ ಶವವನ್ನು ಹೊರತೆಗೆದು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಮೃತರ ಗುರುತು ಹಾಗೂ ವಾರಸುದಾರರ ಪತ್ತೆಗೆ ಯತ್ನಿಸಿದರೂ ಯಾವುದೇ ಸುಳಿವು ದೊರೆತಿಲ್ಲ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ, ಸಾವಿನ ನಿಖರ ಕಾರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ನಗರಸಭೆ ಸಿಬ್ಬಂದಿ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತ ಮಹಿಳೆಯ ಗುರುತು ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.

Body of unidentified woman found in Dantaramakki Lake.

Share

Leave a comment

Leave a Reply

Your email address will not be published. Required fields are marked *

Don't Miss

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಂಗರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಸಭೆಯಲ್ಲಿ...

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು. ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ...

Related Articles

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

ಕಲಿಕೆ ವಯಸ್ಸಿನಲ್ಲಿ ವ್ಯಾಮೋಹಕ್ಕೆ ಒಳಗಾಗದಿರಿ

ಚಿಕ್ಕಮಗಳೂರು: ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಇಂದಿನ ಯುವಪೀಳಿಗೆ ಬಹಳ ಷ್ಟು ಎಚ್ಚರಿಕೆ ವಹಿಸಬೇಕು. ಕಲಿಕೆಯಲ್ಲಿ ಹೊರತಾಗಿ...

ಭೋವಿ ಜಾತಿ ಪ್ರಮಾಣಪತ್ರ ನೀಡಲು ವಿಳಂಬ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ...

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ...