Home namma chikmagalur chikamagalur ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ
chikamagalurCrime NewsHomeLatest Newsnamma chikmagalur

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

Share
Share

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ 3.30 ರ ಅವಧಿಯಲ್ಲಿ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಕಳುಹಿಸಿರುವ ಸಂದೇಶದಿಂದಾಗಿ ನ್ಯಾಯಾಲಯದ ಆವರಣದಲ್ಲಿ ದಿಢೀರ್ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಅಲರ್ಟ್ ಆಗಿರುವ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಇಂಚಿಂಚೂ ಜಾಗವನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜಿತೇಂದ್ರ ದಾಯ್ಮಾ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಅಲ್ಲದೆ ಸಿಬ್ಬಂದಿಯಿಂದ ಮಾಹಿತಿ ಪಡೆದು ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಎಲ್ಲ ಆತಂಕ ಮತ್ತು ಕಟ್ಟುನಿಟ್ಟಿನ ತಪಾಸಣೆಯ ನಡುವೆಯೂ ನ್ಯಾಯಾಲಯದ ಕಲಾಪಗಳನ್ನು ಸ್ಥಗಿತಗೊಳಿಸದಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪಗಳು ಎಂದಿನಂತೆ ಮುಂದುವರಿದಿದ್ದು, ಅದರ ನಡುವೆಯೇ ಪೊಲೀಸರು ಬಿಗಿ ಭದ್ರತೆಯೊಂದಿಗೆ ಆವರಣದ ಒಳಭಾಗದಲ್ಲಿ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇ-ಮೇಲ್ ಮೂಲದ ಪತ್ತೆಗಾಗಿ ಸೈಬರ್ ಕ್ರೈಂ ಪೊಲೀಸರು ಕೂಡ ಕಾರ್ಯಾಚರಣೆಗೆ ಇಳಿದಿದ್ದಾರೆ.

Bomb threat to district court

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...