Home namma chikmagalur chikamagalur ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ
chikamagalurHomeLatest Newsnamma chikmagalur

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

Share
Share

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ ಎನ್.ರಾಜು ತಿಳಿಸಿದರು.

ಅವರು ಇಲ್ಲಿಗೆ ಸಮೀಪದ ಚಿಕ್ಕಗೌಜ ಗ್ರಾಮದಲ್ಲಿ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕರ್ನಾಟಕ ವಿಕಾಸ ರಂಗ ಹಮ್ಮಿಕೊಂಡಿದ್ದ, ಪುಸ್ತಕ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇತ್ತೀಚೆಗೆ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ. ಮೊಬೈಲ್ ಗೀಳಿಗೆ ಮಕ್ಕಳು ಬಲಿಯಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಡಿ.ಡಿ.ಸಲೂನ್ ಚಿಕ್ಕಗೌಜದ ಮಾಲೀಕರಾದ ದರ್ಶನ್ ಅವರಿಗೆ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ಪುಸ್ತಕಗಳನ್ನು ಋನೀಡಿದ,ಭೂಮಿಕಾ ದೂರವಾಹಿನಿ ಮುಖ್ಯಸ್ಥರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನಿಲ್ ಆನಂದ್  ಡಾ.ಬಿ.ಆರ್.ಅಂಬೇಡ್ಕರ್ ರಂತೆ ಓದುವ ಸಂಸ್ಕೃತಿಯನ್ನು ಬೆಳೆಸಿಕೊಂಡು ಸಾಮಾಜಿಕ ಜವಾಬ್ದಾರಿ ಹೆಚ್ಚಿಸಿಕೊಳ್ಳಲು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕರ್ನಾಟಕ ವಿಕಾಸ ರಂಗದ ಅಧ್ಯಕ್ಷರಾದ ಕಾರ್ಯಕ್ರಮಕುಂದೂರು ಅಶೋಕ್ ಪುಸ್ತಕ ಓದುವ ಹವ್ಯಾಸದಿಂದ ನಮ್ಮನ್ನು ನಾವು ತಿದ್ದಿಕೊಳ್ಳಲು ಅವಕಾಶವಾಗುತ್ತದೆ. ಇಂದು ಓದುವ ಸಂಸ್ಕೃತಿಯನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ಕಿವಿಮಾತು ಹೇಳಿದರು

ಕಾರ್ಯಕ್ರಮದಲ್ಲ್ಲಿಗ್ರಾಮ ಪಂಚಾಯ್ತಿಯ‌ ನಿಕಟಪೂರ್ವ ಸದಸ್ಯರಾದ ಹಾಲೇದೇಗೌಡ ಮತ್ತು ಸುರೇಶ್  ಉಪಸ್ಥಿತರಿದ್ದರು, ಶಿಕ್ಷಕರಾದ ಶಿವನಂಜೇಗೌಡ ಕಾರ್ಯಕ್ರಮ ನಿರೂಪಿಸಿದರು

Book culture fosters social responsibility

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...