Home Crime News ಮಕ್ಕಳೆದುರೆ ಗೃಹಿಣಿಯನ್ನ ಬರ್ಬರವಾಗಿ ಕೊಲೆ ಮಾಡಿದ ಪ್ರಿಯಕರ
Crime News

ಮಕ್ಕಳೆದುರೆ ಗೃಹಿಣಿಯನ್ನ ಬರ್ಬರವಾಗಿ ಕೊಲೆ ಮಾಡಿದ ಪ್ರಿಯಕರ

Share
Share

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿದ್ದ ಯುವಕ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರೇ ಗೃಹಿಣಿಯನ್ನು ಚಾಕುವಿನಿಂದ ಚುಚ್ಚಿದಾಗಲೂ ಸಾಯದಿದ್ದಾಗ ಎಳೆದೊಯ್ದು ಕೆರೆಗೆ ಬಿಸಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಕಿಚ್ಚಂಬಿ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಮಹಿಳೆ ತೃಪ್ತಿ ಜೊತೆ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿದ್ದ ಚಿರಂಜೀವಿ ಎಂಬಾತ ಈ ಕೊಲೆ ಮಾಡಿದ ಆರೋಪಿಯಾಗಿದ್ದು, ಹಲವು ದಿನಗಳಿಂದ ಇಬ್ಬರು ಸ್ನೇಹಿತರಾಗಿದ್ದರು, ತಿಂಗಳ ಹಿಂದೆ ಚಿರಂಜೀವಿ ಜೊತೆ ತೃಪ್ತಿ ಹೋಗಿದ್ದಳು. ಈ ಸಂಬಂಧ ಬಾಳೆಹೊನ್ನೂರು ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ಕೂಡ ದಾಖಲಾಗಿತ್ತು. ವಾಪಸ್ ಬಂದ ಬಳಿಕ ಮನೆಯವರ ರಾಜಿ ಬಳಿಕ ಆತನ ಜೊತೆ ಮಾತು ಹಾಗೂ ಸ್ನೇಹವನ್ನು ಬಿಟ್ಟಿದ್ದಳು ಎನ್ನಲಾಗಿದೆ. ಸಂಪೂರ್ಣ ಮಾತು ಬಿಟ್ಟ ಪರಿಣಾಮ ಕೋಪಗೊಂಡ ಚಿರಂಜೀವಿ ಶನಿವಾರ ಏಕಾಏಕಿ ಮನೆಗೆ ನುಗ್ಗಿ ತೃಪ್ತಿಯ ಮೇಲೆ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿದ್ದಾನೆ. ಇಷ್ಟಾದರೂ ಮಹಿಳೆ ಸಾಯದಿದ್ದಾಗ ಮನೆಯಿಂದ ಎಳೆದೊಯ್ದು ಗ್ರಾಮದ ಸಮೀಪದ ಕೆರೆಗೆ ಬಿಸಾಡಿದ್ದಾನೆ. ತೃಪ್ತಿ ಪತಿ ಕೆಲಸಕ್ಕೆ ಹೋಗಿದ್ದಾಗ ಈ ಕೃತ್ಯ ಎಸಗಿದ್ದು, ಘಟನೆಯಿಂದಾಗಿ ಗ್ರಾಮದ ಜನರು ಕೆಲಕಾಲ ಆತಂಕಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಪ್ರಕರಣ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಆರೋಪಿ ಕೊಲೆ ಬಳಿಕ ಪರಾರಿಯಾಗಿದ್ದಾನೆ.

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ ಸುಮಾರು ₹1.70 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನರಸಿಂಹರಾಜಪುರ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ ಫೈನಾನ್ಸ್ ಕಚೇರಿಗೆ ಬೀಗ ಹಾಕಿ ಮಾಲೀಕರು ನಾಪತ್ತೆಯಾಗಿರುವ ಆರೋಪದಡಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...

Related Articles

ವಿದ್ಯುತ್ ಸ್ಪರ್ಶ: ಬೇಲಿ ಕಟಾವು ಮಾಡುತ್ತಿದ್ದ ವಾಚ್‌ಮನ್ ಸಾವು

ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್‌ಮನ್ ಮೃತಪಟ್ಟಿರುವ ಘಟನೆ...

ಕಡಿಮೆ ಬೆಲೆಗೆ ಬಟ್ಟೆ ಕೊಡಿಸುವುದಾಗಿ ನಂಬಿಸಿ ₹20.19 ಲಕ್ಷ ವಂಚನೆ ಆರೋಪ

ಕಡೂರು: ವ್ಯಾಪಾರಕ್ಕಾಗಿ ಕಡಿಮೆ ಬೆಲೆಯಲ್ಲಿ ಬಟ್ಟೆಗಳನ್ನು ಖರೀದಿಸಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹17.58 ಲಕ್ಷ ಪಡೆದು,...

ನಗರದ ಮಾರ್ಕೆಟ್ ರಸ್ತೆಯಲ್ಲಿ ನಕಲಿ ನಾಟಿ ತುಪ್ಪ ತಯಾರಿಸುತ್ತಿದ್ದ ತಂಡ ಪತ್ತೆ

ಚಿಕ್ಕಮಗಳೂರು : ನಕಲಿ ನಾಟಿ ತುಪ್ಪ ತಯಾರಿಸಿ ಹಳ್ಳಿಗಳಿಗೆ ತೆರಳಿ ಮಾರಾಟ ಮಾಡುತ್ತಿದ್ದ ಜಾಲವನ್ನು ಆಹಾರ...

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...