Home Crime News ಮದುವೆ ಮನೆಗೆ ನುಗ್ಗಿ ಹೆಣ್ಣಿನ ಚಿನ್ನಾಭರಣವನ್ನೇ ಕದ್ದ ಖದೀಮರು
Crime News

ಮದುವೆ ಮನೆಗೆ ನುಗ್ಗಿ ಹೆಣ್ಣಿನ ಚಿನ್ನಾಭರಣವನ್ನೇ ಕದ್ದ ಖದೀಮರು

Share
Share

ಚಿಕ್ಕಮಗಳೂರು : ಕಲ್ಯಾಣ ಮಂಟಪಕ್ಕೆ ನುಗ್ಗಿ ಮದುವೆ ಹೆಣ್ಣಿನ ಒಡವೆಯನ್ನೇ ಕಳ್ಳತನ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಬಳಿಯ ಶಾಲಿಮಾರ್ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಮೂರೂವರೆ ಲಕ್ಷದ ವಧುವಿನ ನೆಕ್ಲೆಸ್ ಕಿವಿ ಓಲೆ ಎಗರಿಸಿ ಕಳ್ಳರು ಪರಾರಿಯಾಗಿದ್ದರು.‌

ಮದುವೆ ಮಂಟಪದಲ್ಲಿ ವಧುವಿನ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ವರನ ಮನೆಯವರು ತಂದಿದ್ದ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣ ಕಳುವು ಮಾಡಲಾಗಿದೆ
ಒಡವೆಯನ್ನ ರೂಂನಲ್ಲಿಟ್ಟು ಲಾಕ್ ಮಾಡಿ ಸಂಬಂಧಿಕರು ಮುಹೂರ್ತ ಕಾರ್ಯದಲ್ಲಿ ಬ್ಯುಸಿ ಇದ್ದಾಗ ಸ್ಲೈಡಿಂಗ್ ಕಿಟಕಿಯಿಂದ ನುಸುಳಿ ರೂಮ್ ಲಾಕ್ ಮಾಡಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಒಟ್ಟು ಮೂರುವರೆ ಲಕ್ಷ ಮೌಲ್ಯದ ನೆಕ್ಲೆಸ್ ಹಾಗೂ ಕಿವಿ ಓಲೆ ಕದ್ದು ಖದೀಮರು ಎಸ್ಕೇಪ್ ಆಗಿದ್ದಾರೆ.

ಕಳ್ಳತನದಿಂದ ಕಲ್ಯಾಣ ಮಂಟಪದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮದುವೆ ಮಂಟಪದ  ಪಕ್ಕದಲ್ಲಿನ ನಿರ್ಮಾಣ ಹಂತದ ಕಟ್ಟಡದಿಂದ ಒಳ ನುಗ್ಗಿರುವ ಖದೀಮರು ಕಳವು ಮಾಡಿದ್ದಾರೆ ಎನ್ನಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಹಾಂದಿಯ ಶಾಲಿಮಾರ್ ಹಾಲ್ ನಲ್ಲಿ ಈ ಘಟನೆ ನಡೆದಿದೆ. ಘಟನೆ ನಂತರ ಕೆಲ ಅನುಮಾನಸ್ಪದ ವ್ಯಕ್ತಿಗಳ ದೃಶ್ಯ ಸಿ.ಸಿ ಟಿವಿಯಲ್ಲಿ ಪರಿಶೀಲನೆ ಕೂಡ ಮಾಡಲಾಗುತ್ತಿದೆ. ಸ್ಥಳಕ್ಕೆ ಆಲ್ದೂರು ಪೊಲೀಸರು ಡಾಗ್ ಸ್ಕ್ವಾಡ್ ಜೊತೆ ಭೇಟಿ ನೀಡಿದ್ದು ಕಲ್ಯಾಣ ಮಂಟಪ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...