Home namma chikmagalur chikamagalur ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು
chikamagalurHomeLatest Newsnamma chikmagalurNational NewsState News

ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು

Share
Share

ಚಿಕ್ಕಮಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದು ನೂತನ ರಾಷ್ಟ್ರೀಯ ದಾಖಲೆ ಬರೆದಿದೆ.

ಗ್ರಾಮೀಣ ಯುವ ಪ್ರತಿಭೆ ಜಾಗತಿಕ ವೇದಿಕೆಯಲ್ಲಿ ಇಂತಹ ಉನ್ನತ ಸಾಧನೆ ಮಾಡಿರುವುದಕ್ಕೆ ಕ್ರೀಡಾಭಿಮಾನಿಗಳು, ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ತಾಲೂಕಿನ ಗಣ್ಯರು ಅಪಾರ ಹರ್ಷ ವ್ಯಕ್ತಪಡಿಸಿದ್ದು, ಸ್ನೇಹಾ ಹಾಗೂ ಭಾರತೀಯ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಐತಿಹಾಸಿಕ ಸಾಧನೆ ಕ್ರೀಡಾಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಿರುವ ರಾಜ್ಯದ ಯುವ ಪೀಳಿಗೆಗೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ ದೊಡ್ಡ ಸ್ಫೂರ್ತಿ.

ಇವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಿ ಚಿನ್ನದ ಪದಕಗಳನ್ನು ಗೆದ್ದು ಭಾರತದ ಕೀರ್ತಿ ಪತಾಕೆ ಇನ್ನಷ್ಟು ಹೆಚ್ಚಿಸಲಿ ಎಂದು ಕ್ರೀಡಾಭಿಮಾನಿಗಳು ಹಾರೈಸಿದ್ದಾರೆ.

ತೀವ್ರ ಪೈಪೋಟಿಯಿಂದ ಕೂಡಿದ್ದ ಮಿಶ್ರ 4×100 ಮೀಟರ್ ರಿಲೇ ಅಂತಿಮ ಸುತ್ತಿನಲ್ಲಿ ಭಾರತದ ಸ್ಪರ್ಧಿಗಳಾದ ಗುರಿಂದರ್‌ವೀರ್ ಸಿಂಗ್, ಅನಿಮೇಶ್ ಕುಜೂರ್, ಹರಿತಾ ಭದ್ರಾ ಹಾಗೂ ಕರ್ನಾಟಕದ ಎಸ್.ಎಸ್. ಸ್ನೇಹಾ ಅವರನ್ನೊಳಗೊಂಡ ತಂಡ ಅದ್ಭುತ ಸಮನ್ವಯತೆಯಿಂದ ಓಡಿ 3ನೇ ಸ್ಥಾನ ಗಳಿಸಿದರು. ಈ ಪ್ರದರ್ಶನದ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಲ್ಲದೆ, ನೂತನ ರಾಷ್ಟ್ರೀಯ ದಾಖಲೆ ನಿರ್ಮಿಸಿ ಇತಿಹಾಸ ನಿರ್ಮಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮದ ಎಸ್.ಎಸ್. ಸತ್ಯ ನಾರಾಯಣ ಮತ್ತು ಕೆ.ಎ. ಶಾಲಿನಿ ದಂಪತಿ ಪುತ್ರಿಯಾದ ಸ್ನೇಹಾ, ಶಾಲಾ ದಿನಗಳಿಂದಲೇ ಕ್ರೀಡೆಯಲ್ಲಿ ಅದ್ಭುತ ಪ್ರತಿಭೆ ತೋರುತ್ತಾ ಬಂದವರು. ಗ್ರಾಮೀಣ ಭಾಗದಲ್ಲಿ ಸೀಮಿತ ಕ್ರೀಡಾ ಸೌಲಭ್ಯಗಳ ನಡುವೆಯೂ ಕಠಿಣ ಪರಿಶ್ರಮ, ಅಚಲ ಶ್ರದ್ಧೆ ಹಾಗೂ ನಿರಂತರ ಅಭ್ಯಾಸದ ಬಲದಿಂದ ರಾಜ್ಯ, ರಾಷ್ಟ್ರ ಮತ್ತು ಈಗ ಏಷ್ಯಾ ಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ.

Bronze for S.S. Sneha from Shanuvalli at the Asian Games

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಅತಿರೇಕದ...

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ...

ಶಿಕಾರಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರು...