Home namma chikmagalur chikamagalur ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ
chikamagalurHomeLatest Newsnamma chikmagalur

ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ

Share
Share

ಚಿಕ್ಕಮಗಳೂರು: ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆ.ಬಿ. ಹಾಳ್‌ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಕಮಲಮ್ಮ ಎಂಬುವರು ಮೇ 19ರಂದು ತಮ್ಮ ಸೊಸೆಯೊಂದಿಗೆ ಹಬ್ಬಕ್ಕಾಗಿ ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಸಾಣೇನಹಳ್ಳಿಯಲ್ಲಿರುವ ಸೊಸೆಯ ತವರುಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ.

ಮೇ 24ರಂದು ಬೆಳಗ್ಗೆ ಕಮಲಮ್ಮ ಅವರ ಪಕ್ಕದ ಮನೆಯಲ್ಲೇ ವಾಸವಿರುವ ಹಿರಿಯ ಮಗ ಯೋಗೀಶ್ ಮನೆ ಬಾಗಿಲು ಮುರಿದಿರುವುದನ್ನು ಗಮನಿಸಿ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ತಕ್ಷಣ ಸಂತ್ರಸ್ತರು ಮನೆಗೆ ಬಂದು ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮನೆಯೊಳಗೆ ನುಗ್ಗಿದ ಕಳ್ಳರು ಕಬ್ಬಿಣದ ಬೀರುವಿನ ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಮುರಿದು, ಲಾಕರ್‌ನಲ್ಲಿದ್ದ 38,000 ರೂ ಮೌಲ್ಯದ 7 ಗ್ರಾಂ ಚಿನ್ನಾಭರಣ 2,000 ರೂ ಮೌಲ್ಯದ ಎರಡು ಜೊತೆ ಬೆಳ್ಳಿಯ ಕಾಲು ಚೈನ್ ಹಾಗೂ ದಿವಾನ್ ಕಾಟ್ ಮಾದರಿಯ ಬಾಕ್ಸ್‌ನಲ್ಲಿ ಬಟ್ಟೆಯೊಳಗೆ ಇಟ್ಟಿದ್ದ 35,000 ರೂ ನಗದು ಸೇರಿದಂತೆ ಒಟ್ಟು 75,000 ರೂ ಮೌಲ್ಯದ ಸ್ವತ್ತನ್ನು ದೋಚಿದ್ದಾರೆ.

ಕಮಲಮ್ಮ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ತಡವಾಗಿ ಠಾಣೆಗೆ ಬಂದು ದೂರು ನೀಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Burglary broke into a locked house by breaking the back door

Share

Leave a comment

Leave a Reply

Your email address will not be published. Required fields are marked *

Don't Miss

ಪರವಾನಗಿ ಇಲ್ಲದ ಅಕ್ರಮ ಸಿಂಗಲ್ ಬ್ಯಾರೆಲ್ ಬಂದೂಕು ವಶ

ಚಿಕ್ಕಮಗಳೂರು: ಪರವಾನಗಿ ಇಲ್ಲದೆ ಮನೆಯಲ್ಲಿ ಇಟ್ಟುಕೊಂಡಿದ್ದ ಅಕ್ರಮ ಸಿಂಗಲ್ ಬ್ಯಾರೆಲ್ ಬಂದೂಕನ್ನು (ಎಸ್‌ಬಿಎಂಎಲ್) ಆಲ್ಲೂರು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹರವಿನಗಂಡಿ ಸಮೀಪದ ಅಡ್ಡಮಕ್ಕಿಯಲ್ಲಿ ನಡೆದಿದೆ. ದಾಳಿಯ ವೇಳೆ ಮನೆಯನ್ನು...

ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಕ್ಯಾಮೆರಾ ಕಳವು

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಮೇಲೆ ಕಣ್ಣಿಡಲು ಅಳವಡಿಸಲಾಗಿದ್ದ ಅತ್ಯಾಧುನಿಕ ಕ್ಯಾಮೆರಾಗಳನ್ನೇ ಖದೀಮರು ಹೊತ್ತೊಯ್ದಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಶಾಖೆಯ ಪಾದಮನೆ ಗಸ್ತು ಪ್ರದೇಶದಲ್ಲಿ ಬೆಳಕಿಗೆ ಬಂದಿದೆ....

Related Articles

ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣ ಪತ್ತೆ

ಕೊಪ್ಪ: ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ದಂಧೆಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಕೊಪ್ಪ ತಾಲೂಕಿನ...

ಸೀತಾಳಯ್ಯನಗಿರಿ ರಸ್ತೆಯಲ್ಲಿ ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರಸಿದ್ಧ ಪ್ರವಾಸಿ ತಾಣವಾದ ಸೀತಾಳಯ್ಯನಗಿರಿ ರಸ್ತೆಯಲ್ಲಿ ಚಾಲಕನ ಸಣ್ಣದೊಂದು ಎಡವಟ್ಟಿನಿಂದಾಗಿ ಟೆಂಪೋ ಟ್ರಾವೆಲರ್...

ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ ನಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ...

ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಮಳೆಗೆ ಪ್ರಕೃತಿ ಸೌಂದರ್ಯದ ಹಚ್ಚ ಹಸಿರಿನಿಂದ...