Home Political News ಮೂರೂ ಕ್ಷೇತ್ರಗಳ ಉಪಚುನಾವಣೆ ಜಯಭೇರಿ : ಕಾಂಗ್ರೆಸ್ ಸಂಭ್ರಮಾಚರಣೆ
Political News

ಮೂರೂ ಕ್ಷೇತ್ರಗಳ ಉಪಚುನಾವಣೆ ಜಯಭೇರಿ : ಕಾಂಗ್ರೆಸ್ ಸಂಭ್ರಮಾಚರಣೆ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ್ದಕ್ಕೆ ನಗರದ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ತಾಲೂಕು ಕಚೇರಿಯಿಂದ ಹನುಮಂತಪ್ಪ ಸರ್ಕಲ್ ವರೆಗೂ ಮೆರವಣಿಗೆಯಲ್ಲಿ ‌ಬಂದು ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸಿ.ಎಂ ಸಿದ್ದರಾಮಯ್ಯ ಡಿ.ಸಿಎಂ ಡಿ.ಕೆ ಶಿವಕುಮಾರ್ ಪರ ಜೈಕಾರ ಹಾಕಿದರು. ಶಾಸಕ ತಮ್ಮಯ್ಯ ಸಿ.ಡಿ.ಎ ಅಧ್ಯಕ್ಷ ನಯಾಜ್ ಅಹ್ಮದ್ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಬಿ.ಬಿ ನಿಂಗಯ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು. ವೃತ್ತದ ಸುತ್ತಲೂ ಜಮಾಯಿಸಿದ ಕಾರ್ಯಕರ್ತರು ಜೈ ಕಾಂಗ್ರೆಸ್ ಜೈ ರಾಹುಲ್ ಗಾಂಧಿ ಜೈ ಮಲ್ಲಿಕಾರ್ಜುನ ಖರ್ಗೆ ಎಂದು ಘೋಷಣೆ ಕೂಗಿ ಸಂತಸ ಹಂಚಿ ಕೊಂಡರು.

ಇದೇ ವೇಳೆ ಮಾತನಾಡಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂಎಲ್ ಮೂರ್ತಿ ನಿರೀಕ್ಚೆಗೂ ಮೀರಿ ಫಲಿತಾಂಶ ಬಂದಿದ್ದು ಕಾಂಗ್ರೆಸ್ ಪಕ್ಷಕ್ಕೆ ಇದೀಗ ಜವಾಬ್ದಾರಿ ಹೆಚ್ಚಾಗಿದೆ ನಾವು ಚುನಾವಣೆ ವೇಳೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು, ನೈತಿಕತೆಯ ಬಗ್ಗೆ ಮಾತನಾಡುತ್ತಿದ್ದ ಎಚ್.ಡಿ ಕುಮಾರಸ್ವಾಮಿ ಹಾಗೂ ಬಸವರಾಜ್ ಬೊಮ್ಮಾಯಿ ತಮ್ಮ ಮಕ್ಕಳನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ ಅವರಿಬ್ಬರೂ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಎಂಎಲ್ ಮೂರ್ತಿ ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...