ಚಿಕ್ಕಮಗಳೂರು :
ಮುಂದಿನ ತಿಂಗಳ ಡಿಸೆಂಬರ್ 12 ರಿಂದ 14 ರವರೆಗೂ ನಡೆಯಲಿರುವ ದತ್ತಜಯಂತಿ ಅಂಗವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂದು ನಗರದಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು.
ಇಂದು ದತ್ತಪೀಠದಲ್ಲಿ ಹುಣ್ಣಿಮೆ ಪೂಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಹಿಂದೂಪರ ಸಂಘಟನೆಗಳಿಂದ ಬೃಹತ್ ಬೈಕ್ ಜಾಥಾ ನಡೆಯಿತು.
ನಗರದ ಕೆ.ಎಂ.ರಸ್ತೆ, ಎಂ.ಜಿ ರಸ್ತೆ, ಐ.ಜಿ ರಸ್ತೆಯಲ್ಲಿ ಬೈಕ್ ಜಾಥಾ ಸಾಗಿತು. 100ಕ್ಕೂ ಹೆಚ್ಚು ಬೈಕ್ ಗಳಿಂದ ನಗರದಲ್ಲಿ ಬೈಕ್ ರ್ಯಾಲಿ ನಡೆದಿದ್ದು ಭಗವಾದ್ವಜ ಹಿಡಿದು ಕೇಸರಿ ಶಲ್ಯದೊಂದಿಗೆ ಹಿಂದೂಪರ ಸಂಘಟನೆಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ವಿಶ್ವ ಹಿಂದು ಪರಿಷತ್ ಬಜರಂಗದಳ ಹಾಗೂ ಶ್ರೀರಾಮಸೇನೆ ಅಲ್ಲದೇ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಬೈಕ್ ಜಾಥಾದ ಬಳಿಕ ಇನಾಂ ದತ್ತಾತ್ರೇಯ ಪೀಠಕ್ಕೆ ತೆರಳಿರುವ ಹಿಂದೂಪರ ಸಂಘಟನೆ ಕಾರ್ಯಕರ್ತರು ಪೂಜೆ ಸಲ್ಲಿಸಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನಡೆಯಲಿರುವ ದತ್ತ ಜಯಂತಿ ಕುರಿತು ಸಾರ್ವಜನಿಕರಲ್ಲಿ ಅರಿವು ಜಾಗೃತಿ ಮೂಡಿಸಲು ಸಂಘ ಪರಿವಾರದಿಂದ ಬೈಕ್ ಜಾಥಾ ನಡೆಸಲಾಯಿತು
Leave a comment