Home namma chikmagalur chikamagalur ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ
chikamagalurHomeLatest Newsnamma chikmagalur

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

Share
Share

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ ಖಂಡಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮುಖ್ಯಮಂತ್ರಿಗಳು ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕೇವಲ ಒಂದು ಕೋಮಿನ ಜನರನ್ನು ಓಲೈಸುವ ರಾಜಕಾರಣ ಮಾಡುವುದು ಇತರ ಸಮುದಾಯಗಳಿಗೆ ಮಾಡುವ ದೊಡ್ಡ ಅನ್ಯಾಯವಾಗಿದೆ.

ಕೇವಲ ಒಂದು ವರ್ಗದ ಮತಗಳನ್ನು ನೆಚ್ಚಿಕೊಂಡು ಈ ರೀತಿ ತಾರತಮ್ಯ ಮಾಡುವುದು ಸಂವಿಧಾನ ವಿರೋಧಿ ನೀತಿಯಾಗುತ್ತದೆ. ಸರ್ಕಾರಕ್ಕೆ ಬಡವರ ಮೇಲೆ ನಿಜವಾದ ಕಾಳಜಿ ಇದ್ದರೆ ಎಲ್ಲಾ ನಿಗಮಗಳ ಮೂಲಕ ಸಾಲ ಪಡೆದಿರುವ ಬಡವರ ಬಡ್ಡಿಯನ್ನೂ ತಕ್ಷಣವೇ ಮನ್ನಾ ಮಾಡಲಿ ಎಂದು ಸವಾಲು ಹಾಕಿದರು.

ಇಂತಹ ಜನವಿರೋಧಿ ನೀತಿಗಳು ಮತ್ತು ಸರ್ವಾಧಿಕಾರಿ ನಡವಳಿಕೆಗಳು ಪ್ರಜಾಪ್ರಭುತ್ವದಲ್ಲಿ ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಸಿದರು. ರಾಜ್ಯದ ಜನತೆ ಕಾಂಗ್ರೆಸ್‌ಗೆ 136 ಸ್ಥಾನಗಳನ್ನು ನೀಡಿ ಅಧಿಕಾರಕ್ಕೆ ತಂದಿರುವುದು ಅಭಿವೃದ್ಧಿ ಮಾಡಲಿ ಎಂಬ ಆಶಯದಿಂದಲೇ ಹೊರತು, ಕೇವಲ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಮಾಡಲಿಕ್ಕಲ್ಲ.
ಆದರೆ ಪ್ರಸ್ತುತ ಸರ್ಕಾರ ಜನವಿರೋಧಿ ನೀತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನರ ನಂಬಿಕೆಗೆ ದ್ರೋಹ ಬಗೆಯುತ್ತಿದೆ. ಸರ್ಕಾರದ ಕುರ್ಚಿ ಕಿತ್ತಾಟದಲ್ಲಿ ಜನರ ಕಷ್ಟಗಳನ್ನ ಕೇಳೋರೇ ಇಲ್ಲ. ಜನರಿಗೆ ಇವರ ಸಹವಾಸ ಸಾಕಪ್ಪಾ ಎಂಬಂತಾಗಿದೆ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬಂತೆ ಎಷ್ಟು ದಿನ ಇರ್ತಿವೋ ಗೊತ್ತಿಲ್ಲ. ಇರುವಷ್ಟು ದಿನ ಏನಾದ್ರು ಮಾಡಿಕೊಳ್ಳೋಣ ಎಂದು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
C.T. Ravi condemns the waiver of interest on corporation loans

 

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಉಮೇಶ್ ಜಮೀನು ಕೆಲಸಕ್ಕೆ ತೆರಳಿದ್ದ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಬಿ.ಕೆ....

Related Articles

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ...

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು...

ಅಕ್ರಮವಾಗಿ ಸಾಕುತ್ತಿದ್ದ ಕಾಡುಗಿಳಿಗಳ ವಶ

ಚಿಕ್ಕಮಗಳೂರು: ಮೂರು ಕಾಡು ಗಿಳಿಗಳನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ಸಾಕುತ್ತಿದ್ದ ಆರೋಪದಲ್ಲಿ ನಗರದ ನೆಹರುನಗರದ ನಿವಾಸಿ ಬಾಬು...