Home ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ
HomechikamagalurLatest Newsnamma chikmagalurPolitical News

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

Share
Share

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌ ಸಂಶೋಧನಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಹಿರೇಗೌಜ ಟೀಕಿಸಿದರು.

ಅಧಿಕಾರ ಇಲ್ಲದೇ ಒಂದೂವರೆ ವರ್ಷ ಕಾಲ ಮೌನಕ್ಕೆ ಶರಣಾಗಿದ್ದ ಸಿ.ಟಿ.ರವಿ, ಹಿಂಬಾಗಿಲ ಮೂಲಕ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಸಚಿವೆ ವಿರುದ್ಧ ಕೆಟ್ಟಪದ ಬಳಸಿದ್ದರು, ಸವಿತಾ ಸಮಾಜದ ವಿರುದ್ಧ ನಿಷೇಧಿತ ಪದ ಬಳಸಿ ಆ ಸಮಾಜದಿಂದ ಛೀಮಾರಿ ಹಾಕಿಸಿಕೊಂಡಿದ್ದರು. ತಮ್ಮಯ್ಯ ಅವರು ಸರಳ ಸಜ್ಜನಿಕೆ ವ್ಯಕ್ತಿ. ಈಗ ಅವರ ವಿರುದ್ಧ ಸಿ.ಟಿ.ರವಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಅವರ ದುರ್ನಡತೆ ಕಾರಣದಿಂದ ಜನ ಹೀನಾಯವಾಗಿ ಸೋಲಿಸಿದ್ದಾರೆ. ನಗರಸಭೆಯಿಂದ ಡಿಸೇಲ್ ಹಾಕಿಸಿಕೊಂಡು ಬೆಂಗಳೂರಿಗೆ ತಿರುಗಾಡುತ್ತಿದ್ದರು ಎಂದು ಆರೋಪಿಸಿದ್ದಾರೆ. ತಮ್ಮಯ್ಯ ನಗರಸಭೆ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ನಗರದ ಅಭಿವೃದ್ಧಿ ಕೆಲಸಕ್ಕೆ ನಗರಸಭೆ ಡಿಸೇಲ್ ಬಳಸಿದ್ದಾರೆ. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ‘ಸಿ.ಟಿ.ರವಿ ಅವರಿಗೆ ಮಾತಿನ ಮೇಲೆ ಹಿಡಿತವಿಲ್ಲ. ರಾಜಕೀಯ ಕೆಸರೆರಚಾಟ ನಡೆಸುವುದನ್ನು ಬಿಟ್ಟು ಅಭಿವೃದ್ಧಿಗೆ ಸಹಕಾರ ನೀಡಲಿ, ರಾಜಕೀಯ ಲಾಭಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಸಿದರು.

C.T. Ravi is tongue-tied in frustration over defeat.

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...