Home namma chikmagalur chikamagalur ಸಿ.ಟಿ.ರವಿಗೆ ಸೋಲಿನ ಬಳಿಕ ದಲಿತತ್ವ ನೆನಪು
chikamagalurHomeLatest Newsnamma chikmagalur

ಸಿ.ಟಿ.ರವಿಗೆ ಸೋಲಿನ ಬಳಿಕ ದಲಿತತ್ವ ನೆನಪು

Share
Share

ಚಿಕ್ಕಮಗಳೂರು: ಹಿಂದುತ್ವ ಜಪಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸೋಲಿನ ಬಳಿಕ ದಲಿತತ್ವ ನೆನಪಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಎಂ.ಮಲ್ಲೇಶಸ್ವಾಮಿ ಟೀಕಿಸಿದರು.

ಇಪ್ಪತ್ತು ವರ್ಷ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿರುವ ಸಿ.ಟಿ.ರವಿ ಅವರು ದಲಿತ ಸಂಘಟನೆಗಳ ನಾಯಕರನ್ನು ನಗರ ನಕ್ಸಲರು ಎಂದು ಕರೆದು ಅಪಮಾನ ಮಾಡಿದ್ದರು. ದಲಿತ ಸಂಘಟನೆಗಳ ನಾಯಕರನ್ನು ಭೀಮೋತ್ಸವ ಕಾರ್ಯಕ್ರಮಕ್ಕೆ ಬರುವಂತೆ ಕರೆದಿರುವುದು ದಲಿತರ ಶಕ್ತಿ ಏನೆಂಬುದು ಅರ್ಥವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ದಲಿತರ ಮತಕ್ಕಾಗಿ ಭೀಮೋತ್ಸವದ ಹೆಸರಿನಲ್ಲಿ ರಾಜಕೀಯ ಮಾಡಲು ಸಿ.ಟಿ.ರವಿ ಹೊರಟಿದ್ದಾರೆ. ಆರ್‌ಎಸ್‌ಎಸ್ ಸಂಘಟನೆ ಅವರಿಗೆ ಅಂಬೇಡ್ಕರ್ ಸಿದ್ಧಾಂತಗಳ ಬಗ್ಗೆ ಅರಿವು ಮೂಡಿಸಲಿ. ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡಿದಾಗ ಸಿ.ಟಿ.ರವಿ ಎಲ್ಲಿ ಅಡಗಿ ಕುಳಿತಿದ್ದರು’ ಎಂದು ಪ್ರಶ್ನಿಸಿದರು.

ಕೆಪಿಸಿಸಿ ನೀತಿ ಸಂಶೋಧನಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಶಿವಕುಮಾರ್ ಮಾತನಾಡಿ, ‘ಹಿಂದೂ ನಾವೆಲ್ಲ ಒಂದು ಎನ್ನುವ ಹಿಂದುತ್ವವಾದಿಗಳಿಂದ ದಲಿತರ ಮೇಲೆ ದೌರ್ಜನ್ಯ ನಡೆದಾಗ ಸಿ.ಟಿ.ರವಿ ಅವರ ಬಾಯಿಗೆ ಬೀಗ ಹಾಕಿಕೊಂಡಿರುತ್ತಾರೆ.

ಹಿಂದುತ್ವದ ಜಾತಿ ಹೆಸರಿನಲ್ಲಿ ಸಮಾಜದಲ್ಲಿ ನಿರ್ಮಾಣಗೊಂಡ ಶ್ರೇಣಿಕೃತ ವ್ಯವಸ್ಥೆಯ ವಿರುದ್ಧವೇ ಬಾಬಾ ಸಾಹೇಬ್ ಅಂಬೇಡ್ಕರ್ ಬದುಕಿನುದ್ದಕ್ಕೂ ಹೋರಾಟ ಮಾಡಿದ್ದಾರೆ. ಅದೇ ಹಿಂದುತ್ವ ಪರಿಪಾಲಿಸುವ ಬಿಜೆಪಿಯವರು ಇಂದು ಮತಕ್ಕಾಗಿ ಅಂಬೇಡ್ಕರ್ ಚಿತ್ರ ಇಟ್ಟುಕೊಂಡಿದ್ದಾರೆ ಎಂಬುದನ್ನು ಜನ ಅರಿತಿದ್ದಾರೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಆಲ್ಲೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹುಣಸೇಮಕ್ಕಿ ಲಕ್ಷ್ಮಣ, ತಾಲ್ಲೂಕು ಕೆಡಿಪಿ ಸದಸ್ಯ ಲಕ್ಕಾ ಸಂತೋಷ್, ಮುಖಂಡ ದಿವಾಕರ್ ಉಪಸ್ಥಿತರಿದ್ದರು.

C.T. Ravi remembers Dalitism after defeat

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...