Home namma chikmagalur chikamagalur ವಿದ್ಯುತ್ ದರ ಏರಿಕೆಗೆ ಸಿ.ಟಿ. ರವಿ ತೀವ್ರ ವಾಗ್ದಾಳಿ
chikamagalurHomeLatest Newsnamma chikmagalur

ವಿದ್ಯುತ್ ದರ ಏರಿಕೆಗೆ ಸಿ.ಟಿ. ರವಿ ತೀವ್ರ ವಾಗ್ದಾಳಿ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲ ಕ್ಷೇತ್ರಗಳಲ್ಲಿಯೂ ಬೆಲೆ ಏರಿಕೆಯಾಗಿದೆ ಎಂದು ಅವರು ಆರೋಪಿಸಿದರು. ನೀರು, ಕಸ ನಿರ್ವಹಣೆ, ಸ್ಟಾಂಪ್ ಪೇಪರ್ ಹಾಗೂ ಸ್ಟಾಂಪ್ ಡ್ಯೂಟಿ ದರಗಳು ಹೆಚ್ಚಳವಾಗಿದ್ದು, ಜನನ–ಮರಣ ಪ್ರಮಾಣಪತ್ರಗಳಿಗೂ ಹೆಚ್ಚಿನ ಶುಲ್ಕ ವಿಧಿಸಲಾಗುತ್ತಿದೆ ಎಂದು ಹೇಳಿದರು.

ಅದೇ ರೀತಿ ಅಡುಗೆ ಎಣ್ಣೆ, ಕುಡಿಯುವ ಎಣ್ಣೆ ದರ ಏರಿಕೆಯ ಜೊತೆಗೆ ರೈತರ ಪಹಣಿ ದರ ಹಾಗೂ ಪಂಪ್‌ಸೆಟ್ ಟಿಸಿ ದರವೂ ಹೆಚ್ಚಿಸಲಾಗಿದೆ ಎಂದು ಟೀಕಿಸಿದರು. 20 ರೂಪಾಯಿ ಸ್ಟಾಂಪ್ ಪೇಪರ್ ಕೂಡ ಈಗ ದುಬಾರಿಯಾಗಿದ್ದು, ಚಿನ್ನವನ್ನು ಅಡವಿಟ್ಟು ಸಾಲ ಪಡೆಯುವ ಸಂದರ್ಭದಲ್ಲೂ 0.5% ಸ್ಟಾಂಪ್ ಡ್ಯೂಟಿ ವಿಧಿಸಲಾಗುತ್ತಿದೆ ಎಂದು ಹೇಳಿದರು.

ಪೆಟ್ರೋಲ್ ಮತ್ತು ಡೀಸೆಲ್ ಮೇಲೂ ಪದೇ ಪದೇ ಸೆಸ್ ವಿಧಿಸಲಾಗುತ್ತಿದೆ. ಇದೀಗ ವಿದ್ಯುತ್ ಹಾಗೂ ಬಸ್ ದರ ಏರಿಕೆಯ ಮೂಲಕ ಜನರಿಗೆ ಮತ್ತಷ್ಟು ಭಾರ ಹಾಕಲಾಗಿದೆ ಎಂದು ಆರೋಪಿಸಿದರು.
“ಗಾಳಿಯನ್ನು ಬಿಟ್ಟು ಉಳಿದ ಎಲ್ಲದರ ಮೇಲೂ ತೆರಿಗೆ ಹಾಕಲಾಗಿದೆ. ಗಾಳಿಗೂ ತೆರಿಗೆ ಹಾಕಿದರೆ ನಿಮ್ಮ ಜೀವನ ಸಾರ್ಥಕವಾಗುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದರು.

“ಆಡು ಮುಟ್ಟದ ಸೊಪ್ಪಿಲ್ಲ, ಗಾಳಿಯನ್ನು ಬಿಡದ ಕಾಂಗ್ರೆಸ್ ಎನ್ನುವ ಜಾಗತಿಕ ದಾಖಲೆ ಸೃಷ್ಟಿಯಾಗಬಹುದು. ಜಗತ್ತಿನಲ್ಲಿ ಸರ್ವಾಧಿಕಾರಿಗಳೂ ಗಾಳಿಗೆ ತೆರಿಗೆ ಹಾಕಿಲ್ಲ” ಎಂದು ತೀವ್ರವಾಗಿ ಟೀಕಿಸಿದರು.

C.T. Ravi strongly criticizes the increase in electricity prices

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...