Home namma chikmagalur chikamagalur ಹುಲಿ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾ ಟ್ರ್ಯಾಪ್‌ ಕಳವು
chikamagalurCrime NewsHomeLatest Newsnamma chikmagalur

ಹುಲಿ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾ ಟ್ರ್ಯಾಪ್‌ ಕಳವು

Share
Share

ಚಿಕ್ಕಮಗಳೂರು: ಮುತ್ತೋಡಿ ಅರಣ್ಯ ವಲಯದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆಗೆ ಶಾಕ್ ನೀಡುವಂತಹ ಘಟನೆಯೊಂದು ನಡೆದಿದೆ.

ಅಭಯಾರಣ್ಯಕ್ಕೆ ಪ್ರವೇಶಿಸಲು ಕಟ್ಟುನಿಟ್ಟಿನ ಅನುಮತಿ ಬೇಕಿರುವ ಜಾಗದಲ್ಲೇ ಕಳ್ಳರು ಕೈಚಳಕ ತೋರಿಸಿದ್ದು, ಹುಲಿ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾ ಟ್ರ್ಯಾಪ್‌ಗಳನ್ನು ಕಳವು ಮಾಡಿದ್ದಾರೆ.

ಕೆಸವಿನಮನೆ ಡೀಮ್ಸ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 40 ಸಾವಿರ ರೂಪಾಯಿ ಮೌಲ್ಯದ ಎರಡು ಕ್ಯಾಮೆರಾಗಳು ನಾಪತ್ತೆಯಾಗಿವೆ. ಮೇ 4ರವರೆಗೆ ಕಾರ್ಯನಿರ್ವಹಿಸುತ್ತಿದ್ದ ಈ ಕ್ಯಾಮೆರಾಗಳು ಮೇ 5ರಂದು ಗಸ್ತಿನ ವೇಳೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಉಪವಲಯ ಅರಣ್ಯಾಧಿಕಾರಿ ಯಾಸೀನ್ ಬಾಷಾ ಅವರು ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅರಣ್ಯ ಪಾಲಕ ನಂದೀಶ್ ಅವರೊಂದಿಗೆ ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಈ ಕಳ್ಳತನ ಪ್ರಕರಣ ಗಮನಕ್ಕೆ ಬಂದಿದೆ.

ಹುಲಿ ಗಣತಿ ಕಾರ್ಯಾಚರಣೆಯ ಪ್ರಮುಖ ಹಂತದಲ್ಲಿ ಕ್ಯಾಮೆರಾಗಳು ಕಳವಾಗಿರುವುದು ಇಲಾಖೆಗೆ ಹಿನ್ನಡೆಯನ್ನುಂಟು ಮಾಡಿದೆ. ಅರಣ್ಯದೊಳಗೆ ನುಗ್ಗಿ ಇಲಾಖೆಯ ಉಪಕರಣಗಳನ್ನೇ ಕದ್ದಿರುವುದು ಕಾಡು ಪ್ರಾಣಿಗಳ ಸುರಕ್ಷತೆ ಮತ್ತು ಅರಣ್ಯ ಪ್ರದೇಶದ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿದ್ದು, ಮಲ್ಲಂದೂರು ಪೊಲೀಸರು ಕಳ್ಳರ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

Camera trap installed for tiger census stolen

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತೋಟ ಹಾಗೂ ಮನೆಯ ಕೆಲಸಗಾರನಾಗಿ ಸುಮಾರು ಎರಡು ವರ್ಷಗಳಿಂದ ನಂಬಿಕಸ್ಥನಾಗಿದ್ದ ವ್ಯಕ್ತಿಯೊಬ್ಬನೇ ಮಾಲೀಕರ ಮನೆಯ ಲಾಕರ್‌ನಿಂದ ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು...

200 ರೂ.ಸಾಲ ನೀಡಿಲ್ಲ ಎಂದು ಸುತ್ತಿಗೆಯಿಂದ ತಲೆ ಜಜ್ಜಿ ಕೊಲೆಗೆ ಯತ್ನ

ತರೀಕೆರೆ: ಕೇವಲ ಇನ್ನೂರು ರೂಪಾಯಿ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ತಲೆಯ ಹಿಂಭಾಗಕ್ಕೆ ಸುತ್ತಿಗೆಯಿಂದ ಜಜ್ಜಿ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಜೋಡಿ ಗೋವಿಂದಪ್ಪ...

Related Articles

ಪ್ರತ್ಯೇಕ ರೈತ ಸಂಘಟನೆ ಘೋಷಣೆಗೆ ನಿರ್ಧಾರ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ರೈತ ಸಂಘದಲ್ಲಿ ಸಕ್ರೀಯರಾಗಿದ್ದ...

ಎರಡು ಪ್ರತ್ಯೇಕ ಪೋಕೋ ಪ್ರಕರಣದಲ್ಲಿ ಇಬ್ಬರ ಬಂಧನ

ಬಾಳೆಹೊನ್ನೂರು: ಅಪ್ರಾಪ್ತರ ಮೇಲಿನ ದೌರ್ಜನ್ಯ ಕುರಿತಂತೆ 2 ಪ್ರತ್ಯೇಕ ಪೋಕೋ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಾಳೆಹೊನ್ನೂರು...

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು....