Home namma chikmagalur chikamagalur ಶಾಂತವೇರಿ ಘಾಟಿಯಲ್ಲಿ ಕ್ಯಾಂಟರ್‌ಗೆ ಬೆಂಕಿ
chikamagalurHomeLatest Newsnamma chikmagalur

ಶಾಂತವೇರಿ ಘಾಟಿಯಲ್ಲಿ ಕ್ಯಾಂಟರ್‌ಗೆ ಬೆಂಕಿ

Share
Share

ತರೀಕೆರೆ: ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ವಾಹನ ಚಲಾಯಿಸುತ್ತಿದ್ದ ಚಾಲಕ ಬೆಂಕಿಯ ಜ್ವಾಲೆಯನ್ನು ಗಮನಿಸಿದ ತಕ್ಷಣ ಸಮಯಪ್ರಜ್ಞೆ ಮೆರೆದು ವಾಹನದಿಂದ ಕೆಳಕ್ಕೆ ಹಾರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರಗೊಂಡು ವಾಹನವನ್ನು ಸಂಪೂರ್ಣವಾಗಿ ಆವರಿಸಿದೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ವಾಹನದಲ್ಲಿ ಉಂಟಾದ ತೀವ್ರ ಉಷ್ಣಾಂಶದಿಂದ ಟೈರ್ ರಭಸದಿಂದ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಗ್ನಿಶಾಮಕ ಸಿಬ್ಬಂದಿ ಶಿವಪ್ರಸಾದ್ ಅವರ ಕೈ, ಮುಖ ಹಾಗೂ ಎದೆಯ ಭಾಗಕ್ಕೆ ಗಾಯಗಳಾಗಿವೆ.

ಗಾಯಾಳು ಶಿವಪ್ರಸಾದ್ ಅವರನ್ನು ತಕ್ಷಣ ತರೀಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿ ಅವಘಡದಿಂದ ಕ್ಯಾಂಟರ್ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ಲಿಂಗದಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Canter catches fire at Shantaveri Ghat

Share

Leave a comment

Leave a Reply

Your email address will not be published. Required fields are marked *

Don't Miss

ದೇಶದ ಶಾಂತಿ, ಭದ್ರತೆಗಾಗಿ ಪೊಲೀಸರ ತ್ಯಾಗ ಸ್ಮರಣೀಯ

ಚಿಕ್ಕಮಗಳೂರು: ಖಾಕಿ ಸಮವಸ್ತ್ರವು ಜನರ ವಿಶ್ವಾಸದ ಸಂಕೇತವಾಗಿದ್ದು, ದೇಶದ ಗಡಿ ರಕ್ಷಣೆ, ಆಂತರಿಕ ಭದ್ರತೆ ಹಾಗೂ ವಿಪತ್ತು ನಿರ್ವಹಣೆಯಲ್ಲಿ ಪೊಲೀಸ್ ಪಡೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಯಶ್ ಪಾಲ್...

ಅಜ್ಜಂಪುರದಲ್ಲಿ ಬೈಕ್‌ನಿಂದ ಬಿದ್ದು ಮಹಿಳೆ ಸಾವು 

ಅಜ್ಜಂಪುರ: ಪತಿಯ ಬೈಕ್‌ನಲ್ಲಿ ಹಿಂಬದಿ ಕುಳಿತು ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌರಾಪುರ–ಕಾಟಿಗನೆರೆ ನಡುವಿನ ರಸ್ತೆಯಲ್ಲಿ ಅ.20ರಂದು ನಡೆದಿದೆ. ಮೃತರನ್ನು ಅಮೃತಾಪುರ...

Related Articles

ಯಳ್ಳಂಬಳಸೆಯಲ್ಲಿ 5 ವಾಲ್ಮೀಕಿ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಆರೋಪ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಯಳ್ಳಂಬಳಸೆ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಐದು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ...

ಶಾಶ್ವತ ಕುಡಿಯುವ ನೀರಿನ ಸೌಲಭ್ಯಕ್ಕೆ ರಾಜ್ಯ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಅಜ್ಜಂಪುರ ತಾಲ್ಲೂಕಿನ ಬರಗಾಲ ಪೀಡಿತ ಸಿದ್ದಲಿಪುರ, ಕೆಂಚಾಪುರ, ಅತ್ತಿಗಟ್ಟೆ, ಮಾಕನಹಳ್ಳಿ ಹಾಗೂ ಜಲದಿಹಳ್ಳಿ ಗ್ರಾಮಗಳಿಗೆ...

ಅರಣ್ಯ ಇಲಾಖೆ ಬೋನ್‌ಗೆ ಬಿದ್ದ ಚಿರತೆ ಸೆರೆ

ಕಡೂರು:ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನ್‌ಗೆ ಚಿರತೆಯೊಂದು ಬಿದ್ದಿದ್ದು,...

ಎನ್‌ಡಿಎಗೆ ಜಯ-ಕಾಂಗ್ರೆಸ್‌ಗೆ ಮತದಾರರ ಮರ್ಮಾಘಾತ

ಚಿಕ್ಕಮಗಳೂರು: ರಾಜ್ಯದ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಒಳಗೊಂಡ ಎನ್‌ಡಿಎ ಅಭ್ಯರ್ಥಿಗಳು ಗೆಲುವು...