ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು-ಬೀರೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಡೂರು ಮತ್ತು ಬೀರೂರು ನಡುವಿನ ಲಕ್ಷ್ಯ ಕನ್ವೆನ್ನನ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಬೀರೂರಿನ ತೀರ್ಥ ಎಂದು ಗುರುತಿಸಲಾಗಿದೆ.
ಕಾರು ಚಾಲಕನ ಅತಿ ವೇಗ ಮತ್ತು ಅಜಾಗರೂಕ ಚಾಲನೆಯೇ ಈ ಘಟನೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಡಿಕ್ಕಿಯ ರಬಸಕ್ಕೆ ತೀರ್ಥ ಅವರ ದೇಹಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯು ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Car-bike collision leaves biker dead on the spot
Leave a comment