ಕಡೂರು: ತಾಲ್ಲೂಕಿನ ಬುಕ್ಕಸಾಗರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರೊಂದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಕೇರಳ ಮೂಲದ ಮಹಮದ್ ಅನೀಸ್ (25) ಮತ್ತು ಷಹೀರ್ (24) ಮೃತಪಟ್ಟವರು. ಚಿಕ್ಕಮಗಳೂರಿನಿಂದ ಕಡೂರಿನತ್ತ ಹೊರಟಿದ್ದ ಸ್ವಿಫ್ಟ್ ಕಾರು ರಸ್ತೆಯಲ್ಲಿದ್ದ ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿದೆ. ಕಾರು ಚಾಲಕನಿಗೆ ಗಾಯಗಳಾಗಿದ್ದು, ಕಡೂರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ; ಮಹಿಳೆ ಸಾವು: ಕಡೂರಳ್ಳಿ ಕಡೆಯಿಂದ ಕಡೂರಿನತ್ತ ಸ್ಕೂಟಿಯಲ್ಲಿ ತೆರಳುತ್ತಿದ್ದ ಧರ್ಮಸ್ಥಳ ಸಂಘದ ಕಾರ್ಯಕರ್ತೆ ಉಷಾ (41) ಎಂಬುವರಿಗೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.
Car-bike collision: Two dead
Leave a comment