Home namma chikmagalur ಕಾರು – ಬೈಕ್‌ ಡಿಕ್ಕಿ : ಇಬ್ಬರ ಸಾವು
namma chikmagalurchikamagalurHomeLatest News

ಕಾರು – ಬೈಕ್‌ ಡಿಕ್ಕಿ : ಇಬ್ಬರ ಸಾವು

Share
Share

ಕಡೂರು: ತಾಲ್ಲೂಕಿನ ಬುಕ್ಕಸಾಗರ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರೊಂದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಕೇರಳ ಮೂಲದ ಮಹಮದ್‌ ಅನೀಸ್‌ (25) ಮತ್ತು ಷಹೀರ್‌ (24) ಮೃತಪಟ್ಟವರು. ಚಿಕ್ಕಮಗಳೂರಿನಿಂದ ಕಡೂರಿನತ್ತ ಹೊರಟಿದ್ದ ಸ್ವಿಫ್ಟ್‌ ಕಾರು ರಸ್ತೆಯಲ್ಲಿದ್ದ ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿದೆ. ಕಾರು ಚಾಲಕನಿಗೆ ಗಾಯಗಳಾಗಿದ್ದು, ಕಡೂರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ; ಮಹಿಳೆ ಸಾವು: ಕಡೂರಳ್ಳಿ ಕಡೆಯಿಂದ ಕಡೂರಿನತ್ತ ಸ್ಕೂಟಿಯಲ್ಲಿ ತೆರಳುತ್ತಿದ್ದ ಧರ್ಮಸ್ಥಳ ಸಂಘದ ಕಾರ್ಯಕರ್ತೆ ಉಷಾ (41) ಎಂಬುವರಿಗೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

Car-bike collision: Two dead

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...