Home namma chikmagalur chikamagalur ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು
chikamagalurHomeLatest Newsnamma chikmagalur

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

Share
Share

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಘಟನೆ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿ ದಂಪತಿ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರು ನದಿಗೆ ಉರುಳುತ್ತಿದ್ದಂತೆಯೇ ನದಿ ಮಧ್ಯದಲ್ಲಿದ್ದ ಬೃಹತ್ ಬಂಡೆಗಲ್ಲಿಗೆ ಸಿಲುಕಿ ನಿಂತಿದೆ.

ಹೀಗಾಗಿ ರಭಸವಾಗಿ ಹರಿಯುತ್ತಿದ್ದ ನದಿಯ ನೀರಿನಲ್ಲಿ ಕೊಚ್ಚಿಹೋಗಬೇಕಿದ್ದ ದಂಪತಿ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದ ದಂಪತಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಸೋಮಾವತಿ ನದಿ ರಭಸವಾಗಿ ಹರಿಯುತ್ತಿದ್ದ ಹಿನ್ನೆಲೆಯಲ್ಲಿ, ಒಂದು ವೇಳೆ ಆ ಬಂಡೆಗಲ್ಲು ಕಾರಿಗೆ ಅಡ್ಡಬರದೇ ಹೋಗಿದ್ದರೆ ದಂಪತಿ ಕಾರಿನ ಸಮೇತ ನೀರಿನ ಸೆಳೆತಕ್ಕೆ ಕೊಚ್ಚಿಹೋಗುವ ಸಾಧ್ಯತೆಯಿತ್ತು ಎನ್ನಲಾಗಿದೆ. ಇನ್ನು ಈ ಸೇತುವೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ತಡೆಗೋಡೆ ಇಲ್ಲದ ಕಾರಣ ವರ್ಷಕ್ಕೆ ಸರಾಸರಿ ಮೂರರಿಂದ ನಾಲ್ಕು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರವಾಸಿಗರು ಹಾಗೂ ಸಾರ್ವಜನಿಕರು ಸಂಚರಿಸುವ ಈ ಸೇತುವೆಗೆ ತಕ್ಷಣ ತಡೆಗೋಡೆ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

Car loses control and falls into Somavati river

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...