Home Crime News ಮಗನ ವಿರುದ್ಧವೇ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ ಅಪ್ಪ
Crime NewsHomeLatest Newsnamma chikmagalurTarikere

ಮಗನ ವಿರುದ್ಧವೇ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ ಅಪ್ಪ

Share
Share

ತರೀಕೆರೆ: ಬೈಕ್ ರೈಡಿಂಗ್ ಎಂದರೆ ಇಂದಿನ ಯುವಕರಿಗೆ ಎಲ್ಲಿಲ್ಲದ ಕ್ರೇಜ್. ಆದರೆ ಆ ವೇಗದ ಮಜಾ ಕೆಲವೊಮ್ಮೆ ಹೆತ್ತವರಿಗೇ ತಲೆ ನೋವು ತರುತ್ತದೆ ಎಂಬುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ತಂದೆ ಬುದ್ದಿಮಾತು ಹೇಳಿದರೂ ಕೇಳದೆ ಅತಿವೇಗವಾಗಿ ಬೈಕ್ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಮಗನ ವಿರುದ್ಧವೇ ತಂದೆಯೊಬ್ಬರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಮೇ 5ರಂದು ರಾಕೇಶ್ ಎಂಬ ಯುವಕ ತನ್ನ ತಂದೆಯನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಸ್ಟಾರ್ ಸಿಟಿ ಬೈಕ್ ಏರಿ ಹೊರಟಿದ್ದನು. ಮಗನ ಬೈಕ್ ಚಾಲನೆಯ ಸ್ಪೀಡ್ ನೋಡಿ ಗಾಬರಿಯಾದ ತಂದೆ, “ಗಾಡಿಯನ್ನು ಸ್ವಲ್ಪ ನಿಧಾನವಾಗಿ ಓಡಿಸು ಮಗನೇ..” ಎಂದು ಪದೇ ಪದೇ ಗೋಗರೆದರೂ ವೇಗದ ಅಮಲಿನಲ್ಲಿದ್ದ ಮಗ ಮಾತ್ರ ತಂದೆಯ ಮಾತನ್ನು ಗಾಳಿಗೆ ತೂರಿ ಗಾಡಿಯನ್ನು ಮತ್ತಷ್ಟು ಜೋರಾಗಿ ಮುನ್ನುಗ್ಗಿಸಿದ್ದಾನೆ.

ಬೈಕ್‌ ಹಾಳೂರು ಬಸವೇಶ್ವರ ದೇವಸ್ಥಾನದ ಬಳಿಯ ರಸ್ತೆಗೆ ಬರುತ್ತಿದ್ದಂತೆ ಹಠಾತ್ತನೆ ನಾಯಿಯೊಂದು ಅಡ್ಡ ಬಂದಿದೆ. ಅತಿವೇಗದಲ್ಲಿದ್ದ ಕಾರಣ ರಾಕೇಶ್ ಗಾಬರಿಯಿಂದ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ರಸ್ತೆಯಲ್ಲೇ ಸ್ಕಿಡ್ ಆಗಿದ್ದು, ಇಬ್ಬರೂ ಕೆಳಗೆ ಬಿದ್ದಿದ್ದಾರೆ. ರಾಕೇಶ್ ಹೆಟ್ ಧರಿಸಿದ್ದರಿಂದ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಆದರೆ ಹೆಟ್ ಧರಿಸದೆ ಹಿಂಬದಿ ಕುಳಿತಿದ್ದ ತಂದೆಯ ಹಣೆ, ಮೂಗು ಹಾಗೂ ದವಡೆ ಹಲ್ಲಿಗೆ ತೀವ್ರ ಗಾಯಗಳಾಗಿತ್ತು. ಹೀಗಾಗಿ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಿದ್ದು ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ 13 ದಿನ ಚಿಕಿತ್ಸೆ ಪಡೆದು ಮನೆಗೆ ಮರಳಿದ ತಂದೆಗೆ ಮಗನ ಬೇಜವಾಬ್ದಾರಿತನದ ಮೇಲೆ ತೀವ್ರ ಆಕ್ರೋಶ ಮೂಡಿದೆ.

ಮಗನೇ ಆದರೂ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು, ಇಲ್ಲದಿದ್ದರೆ ಮುಂದೆ ದೊಡ್ಡ ಅಪಾಯ ತಂದುಕೊಳ್ಳುತ್ತಾನೆ ಎಂದು ನಿರ್ಧರಿಸಿದ ತಂದೆ, ಕುಟುಂಬಸ್ಥರೊಂದಿಗೆ ಚರ್ಚಿಸಿ ತರೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಂದೆಯ ದೂರಿನ ಮೇರೆಗೆ ಪೊಲೀಸರು ಮಗ ರಾಕೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Case against son who caused accident by speeding on bike

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...