ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.
ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ ನಿವಾಸಿ ಹಾಗೂ ಎಲೆಕ್ಟ್ರಿಷಿಯನ್ ಆಗಿರುವ ವೆಂಕಟೇಶ ಕೆ.ಎಂ. (40) ಅವರು ನೀಡಿದ ದೂರಿನ ಪ್ರಕಾರ, 2023ರಲ್ಲಿ ಗ್ರಾಮದ ಶಿವರಾಜ ಮತ್ತು ಅವರ ತಾಯಿ ಚಂದ್ರಮ್ಮ ಮನೆ ನಿರ್ಮಾಣಕ್ಕೆ ಸಹಾಯ ಮಾಡುವಂತೆ ಕೇಳಿದ್ದರಿಂದ ₹50 ಸಾವಿರ ಸಾಲವಾಗಿ ನೀಡಿದ್ದರು. ಬಳಿಕ ಹಲವು ಬಾರಿ ಹಣವನ್ನು ವಾಪಸ್ ಕೇಳಿದರೂ ವಿವಿಧ ಕಾರಣಗಳನ್ನು ಹೇಳಿ ನೀಡದೇ ಮುಂದೂಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಗಸ್ಟ್ 3ರಂದು ಸಂಜೆ ಯಗಟಿ ಗ್ರಾಮದ ಚಂದ್ರಶೇಖರ್ ಅವರ ತೋಟದಲ್ಲಿ ಮೋಟಾರ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಮಾಡುತ್ತಿದ್ದ ವೇಳೆ ಶಿವರಾಜ ಮತ್ತು ಚಂದ್ರಮ್ಮ ಹಸುಗಳನ್ನು ಮೇಯಿಸಿಕೊಂಡು ಅಲ್ಲಿಗೆ ಬಂದಿದ್ದರು. ಈ ವೇಳೆ ವೆಂಕಟೇಶ ಅವರು ಸಾಲದ ಹಣವನ್ನು ಹಿಂದಿರುಗಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಶಿವರಾಜನು ಕೊರಳಪಟ್ಟಿ ಹಿಡಿದು “ಹಣ ಕೊಡುವುದಿಲ್ಲ, ಏನು ಮಾಡಿಕೊಳ್ಳುತ್ತೀಯೋ ಮಾಡಿಕೋ” ಎಂದು ಅವಾಚ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಚಂದ್ರಮ್ಮ ಅವರು ಕೈಯಲ್ಲಿದ್ದ ಕೋಲಿನಿಂದ ತಲೆ, ಕೈ ಹಾಗೂ ಮೈಗೆ ಹೊಡೆದಿದ್ದು, ಇಬ್ಬರೂ ಸೇರಿ ಕೆಳಗೆ ಬೀಳಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸ್ಥಳದಲ್ಲಿದ್ದ ಚಂದ್ರಪ್ಪ ಹಾಗೂ ಪಕ್ಕದ ತೋಟದ ಕುಮಾರ ಅವರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ. ನಂತರ ಗಾಯಗೊಂಡ ವೆಂಕಟೇಶ ಅವರನ್ನು ಅವರ ಪತ್ನಿ ಕಲಾವತಿ ಯಗಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಚಿಕಿತ್ಸೆ ಪಡೆದ ಬಳಿಕ ಆಗಸ್ಟ್ 5ರಂದು ಯಗಟಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರಿನ ಆಧಾರದ ಮೇಲೆ ಶಿವರಾಜ ಹಾಗೂ ಚಂದ್ರಮ್ಮ ವಿರುದ್ಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 90/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 115(2), 118(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Case filed against mother and son for assaulting them for asking for loan money
ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...
ByN Raju Chief EditorSeptember 29, 2026ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...
ByN Raju Chief EditorSeptember 28, 2026ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...
ByN Raju Chief EditorOctober 6, 2026ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...
ByN Raju Chief EditorOctober 6, 2026ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...
ByN Raju Chief EditorOctober 6, 2026ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...
ByN Raju Chief EditorOctober 6, 2026Excepteur sint occaecat cupidatat non proident
Leave a comment