ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾದ ಗಂಭೀರ ಪ್ರಕರಣವೊಂದು ದಾಖಲಾಗಿದೆ.
ರಾಷ್ಟ್ರೀಯ ನಾಪತ್ತೆಯಾದ ಮತ್ತು ಶೋಷಿತ ಮಕ್ಕಳ ಕೇಂದ್ರ (NCMEC) ನೀಡಿದ ದೂರಿನ ವರದಿ ಆಧರಿಸಿ ಸೈಬರ್ ಪೊಲೀಸ್ ಸಿಬ್ಬಂದಿ ಹೆಚ್.ಕೆ. ಮಹೇಂದ್ರ ಅವರು ದೂರು ದಾಖಲಿಸಿದ್ದಾರೆ ಎಂದು ಎನ್ಸಿಆರ್ಪಿ ಪೋರ್ಟಲ್ನಲ್ಲಿ ಲಭ್ಯವಾದ ತಾಂತ್ರಿಕ ಮಾಹಿತಿ ಹಾಗೂ ಐಪಿ ಅಡ್ರೆಸ್ ಆಧರಿಸಿ ತನಿಖೆ ನಡೆಸಿದಾಗ, ಮೂಡಿಗೆರೆ ತಾಲೂಕಿನ ಬಣಕಲ್ ನಿವಾಸಿ ಪುಷ್ಪಾ ಎಂಬುವವರ ಮೊಬೈಲ್ ಸಂಖ್ಯೆಯಿಂದ ಈ ಕೃತ್ಯ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.
ಅಪ್ರಾಪ್ತರು ನಗ್ನವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಸುಮಾರು ಒಂದೂವರೆ ನಿಮಿಷದ ವಿಡಿಯೋವನ್ನು ಡೌನ್ಲೋಡ್ ಹಾಗೂ ಶೇರ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಸದ್ಯ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಲಾಗಿದೆ.
Case registered for sharing obscene video on social media
Leave a comment