Home Crime News ಭೈರಾಪುರ ಗ್ರಾಮದಲ್ಲಿ ಜಾತಿ ನಿಂದನೆ ಪ್ರಕರಣ ದಾಖಲು
Crime NewsHomeLatest Newsnamma chikmagalurTarikere

ಭೈರಾಪುರ ಗ್ರಾಮದಲ್ಲಿ ಜಾತಿ ನಿಂದನೆ ಪ್ರಕರಣ ದಾಖಲು

Share
Share

ತರೀಕೆರೆ: ತಮ್ಮದೇ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅಕ್ರಮವಾಗಿ ಮುನ್ನುಗ್ಗಿ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಲಿಂಗದಹಳ್ಳಿಯ ಶಾಂತಿನಗರದ ನಿವಾಸಿಯಾದ ಸಿದ್ದಮ್ಮ ಎಂಬುವವರೇ ಈ ದೌರ್ಜನ್ಯಕ್ಕೆ ಒಳಗಾದ ದುರ್ದೈವಿ. ಸಿದ್ದಮ್ಮನವರು ಭೈರಾಪುರ ಗ್ರಾಮದ ಸರ್ವೇ ನಂಬರ್ 73 (ಹಳೆದು), 101 (ಹೊಸದು) ರಲ್ಲಿರುವ ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿಸುತ್ತಿದ್ದಾಗ, ಅದೇ ಗ್ರಾಮದ ಸಣ್ಣಪ್ಪ ಹಾಗೂ ಆತನ ಮಗ ಮನು ಎಂಬುವವರು ಜಮೀನಿಗೆ ಅಕ್ರಮವಾಗಿ ನುಗ್ಗಿದ್ದಾರೆ.

ಈ ವೇಳೆ “ಉಳುಮೆ ಮಾಡಿದ ಜಾಗವನ್ನು ತುಳಿಯಬೇಡಿ” ಎಂದು ಸಿದ್ದಮ್ಮ ಹೇಳಿದ್ದೇ ತಡ, ಆಕ್ರೋಶದ ಕಟ್ಟೆ ಒಡೆದ ಸಣ್ಣಪ್ಪ ಸಿದ್ದಮ್ಮನವರ ವಿರುದ್ಧ ಅಸಭ್ಯವಾಗಿ ಜಾತಿ ನಿಂದನೆ ಮಾಡಿ ಕಾಲಿನಿಂದ ಒದೆಯಲು ಯತ್ನಿಸಿದ್ದಾನೆ.

ತಂದೆಯ ಜೊತೆಗೂಡಿದ ಮಗ ಮನು ಸಿದ್ದಮ್ಮನವರನ್ನು ಜೋರಾಗಿ ತಳ್ಳಿದ್ದು, ಅವರು ಕಲ್ಲಿನ ರಾಶಿಯ ಮೇಲೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಸಿದ್ದಮ್ಮನವರ ಸೊಂಟ, ತೊಡೆ ಹಾಗೂ ಕಿವಿಯ ಭಾಗಕ್ಕೆ ಬಲವಾದ ಗಾಯಗಳಾಗಿವೆ. ಇಷ್ಟಕ್ಕೇ ನಿಲ್ಲದ ಆರೋಪಿ ತಂದೆ-ಮಗ, ಜಮೀನಿನಿಂದ ಖಾಲಿ ಮಾಡಿಸುವುದಾಗಿ ಅಬ್ಬರಿಸಿದ್ದಲ್ಲದೆ, ಮುಂದಿನ ದಿನಗಳಲ್ಲಿ ಒಬ್ಬಂಟಿಯಾಗಿ ಸಿಕ್ಕಾಗ ಬೈಕ್‌ನಲ್ಲಿ ಗುದ್ದಿಸಿ ಕೊಲೆ ಮಾಡುವುದಾಗಿ ಬಹಿರಂಗವಾಗಿಯೇ ಪ್ರಾಣ ಬೆದರಿಕೆ ಒಡ್ಡಿದ್ದಾರೆ.

ಸದ್ಯ ತೀವ್ರವಾಗಿ ಗಾಯಗೊಂಡಿರುವ ಸಿದ್ದಮ್ಮನವರು ತರೀಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ತರೀಕೆರೆ ಪೊಲೀಸರು ಆರೋಪಿಗಳ ವಿರುದ್ಧ ಅಟ್ರಾಸಿಟಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

Caste abuse case registered in Bhairapura village

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...