Home namma chikmagalur chikamagalur ದನ ಅಕ್ರಮ ಸಾಗಾಟ: ಪ್ರಕರಣ ದಾಖಲು
chikamagalurHomeLatest Newsnamma chikmagalur

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

Share
Share

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ ವಯಸ್ಸಿನ ಹೋರಿಯನ್ನು ಪಿಕಪ್ ವಾಹನದಲ್ಲಿ ಶನಿವಾರ ಅಕ್ರಮವಾಗಿ ಸಾಗಿಸಲು ಪ್ರಯತ್ನಿಸುತ್ತಿದ್ದನ್ನು ಪೊಲೀಸರು ಪತ್ತೆಮಾಡಿದ್ದಾರೆ.

ಹೋರಿಯ ಕಾಲುಗಳನ್ನು ಕಟ್ಟಿ ಟಾರ್ಪಾಲಿನಿಂದ ಮುಚ್ಚಿ ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಪೊಲೀಸರನ್ನು ಕಂಡು ಒಬ್ಬ ಆರೋಪಿ ವಾಹನದಿಂದ ಜಿಗಿದು ಓಡಿಹೋಗಿದ್ದ. ವಾಹನದಲ್ಲಿದ್ದ ಆರೋಪಿಗಳಾದ ಮಂಜುನಾಥ್, ಕಿರಣ್, ಮಹಮ್ಮದ್ ಮುಬಾರಕ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಹೋರಿಯನ್ನು ಸಬ್ಬೇನಹಳ್ಳಿಯಿಂದ ಕಸಾಯಿಖಾನೆಗೆ ಸಾಗಾಟ ಮಾಡಲು ಕೊಂಡೊಯ್ಯುತ್ತಿದ್ದೆವು ಎಂದು ಮಾಹಿತಿ ನೀಡಿದ್ದಾರೆ.

ಪೊಲೀಸರು ವಾಹನ ಮತ್ತು ಹೋರಿಯನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹೋರಿ ₹15 ಸಾವಿರ ಮೌಲ್ಯದ್ದಾಗಿದೆ. ಹೋರಿಯನ್ನು ಇಂದಾವರದಲ್ಲಿರುವ ಗೋಶಾಲೆಗೆ ಕಳುಹಿಸಿಕೊಡಲಾಗಿದೆ ಎಂದು ಪಿಎಸ್‌ಐ ರವಿ ಜಿ.ಎ. ಮಾಹಿತಿ ನೀಡಿದರು.

ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ರವಿ, ಸಂದೀಪ್ ಎಂ.ಜಿ., ಪ್ರಸನ್ನ ಎಂ.ಎಚ್., ರಘು ಎಲ್.ಎಲ್., ಅಣ್ಣಪ್ಪ ಭಾಗವಹಿಸಿದ್ದರು.

Cattle smuggling: Case registered

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕಳವು

ಮೂಡಿಗೆರೆ: ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ, ಕುತ್ತಿಗೆಗೆ ಕೈ ಹಾಕಿ 24 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮೂಡಿಗೆರೆ ಪಟ್ಟಣದ ಕುರ್ಕಮಕ್ಕಿ ವಾರ್ಡ್‌ನಲ್ಲಿ ಸೆ.5ರಂದು ನಡೆದಿದೆ....

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು ನೇಮಕ ಮಾಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡಿದ್ದು, ಚುನಾವಣಾ ದಿನಾಂಕ ಘೋಷಣೆಯಷ್ಟೇ ಬಾಕಿ ಉಳಿದಿದೆ....

Related Articles

ಪೊಲೀಸ್ ಅಧಿಕಾರಿ ಖಾಕಿ ಸಮವಸ್ತ್ರ ಧರಿಸಿ ಗೂಂಡಾಗಿರಿ

ಚಿಕ್ಕಮಗಳೂರು: ಟಿ. ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರಿಗೆ ಇನ್ಸ್‌ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೃಷಿ ಸಾಲಕ್ಕೆ ಶೇ.50 ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಗೆ ವಂಚನೆ

ಶೃಂಗೇರಿ: ಬ್ಯಾಂಕ್‌ನಿಂದ ಕೃಷಿ ಸಾಲ ಮಂಜೂರು ಮಾಡಿಸಿ, ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಂದ...

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸರ್ಕಾರಿ ಬಸ್ ಹರಿದು ಇಬ್ಬರು ಸಾವು

ಕಡೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ರಸ್ತೆಗೆ ಬಿದ್ದ ಸವಾರರ ಮೇಲೆ...

ಮನೆಯ ಹಿತ್ತಲಿಗೆ ನುಗ್ಗಿ ನೀರು ಕುಡಿದ ಚಿರತೆ

ಕಡೂರು: ಕಾಫಿನಾಡಿನ ಬಯಲು ಭಾಗದಲ್ಲಿ ಚಿರತೆಗಳ ಓಡಾಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆಯ ಹಿತ್ತಲಿಗೆ...