Home namma chikmagalur chikamagalur ಜನಮನ ಆಕರ್ಷಿಸುತ್ತಿದೆ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನ
chikamagalurHomeLatest Newsnamma chikmagalur

ಜನಮನ ಆಕರ್ಷಿಸುತ್ತಿದೆ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನ

Share
Share
ಚಿಕ್ಕಮಗಳೂರು:  ನಗರದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನವು ಕರಕೌಶಲದೊಂದಿಗೆ ಅನಾವರಣಗೊಳ್ಳುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೆಚ್ಚೆಚ್ಚು ಜನಮನ ಆಕರ್ಷಿಸುತ್ತಿದೆ. ಜಿಲ್ಲಾಡಳಿತ ಅತ್ಯಂತ ವ್ಯವಸ್ಥಿತವಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಅವರು ಶ್ಲಾಘಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಚಿಕ್ಕಮಗಳೂರು ಉದ್ಯಾನ ಕಲಾಸಂಘ, ಕೆಎಪಿಪಿಇಸಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸೋಮವಾರ ಬೆಳಿಗ್ಗೆ ಗಣರಾಜ್ಯೋತ್ಸವ ಅಂಗವಾಗಿ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನ-೨೦೨೬ ಅನ್ನು ಟೇಪು ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತೀ ವರ್ಷವೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ತೋಟಗಾರಿಕೆ ಜಂಟಿ ನಿರ್ದೇಶಕರು ಅತ್ಯಂತ ಆಸಕ್ತಿಯಿಂದ ಕಾರ್ಯ ನಿರ್ವಹಿಸಿ ಇದನ್ನು ಯಶಸ್ವಿಗೊಳಿಸುತ್ತಿದ್ದು, ಅವರನ್ನು ಅಭಿನಂದಿಸುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಅವರು ಮಾತನಾಡಿ, ಈ ಬಾರಿ ಆಯೋಜಿಸಿರುವ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನವನ್ನು ದಾನಿಗಳು, ಸಂಘ-ಸಂಸ್ಥೆಗಳ ನೆರವಿನಿಂದ ಆಯೋಜಿಸಲಾಗಿದೆ. ಕಳೆದ ಬಾರಿ ಮೂರು ಲಕ್ಷ ಜನರು ಈ ಪ್ರದರ್ಶನವನ್ನು ವೀಕ್ಷಿಸಿದ್ದು, ಈ ಬಾರಿ ಹತ್ತು ಲಕ್ಷ ಜನರು ವೀಕ್ಷಿಸುವ ನಿರೀಕ್ಷೆ ಇದೆ. ಈ ಪ್ರದರ್ಶನದಲ್ಲಿ ಜಿಲ್ಲೆಯ ಸಂಸ್ಕೃತಿಯನ್ನು  ಬಿಂಬಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಬಳಿಗೆ ತೆರಳಿ ವಿಶೇಷ ಅನುದಾನ ಪಡೆದು ಮುಂದಿನ ವರ್ಷದಿಂದ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನವನ್ನು ಮಲೆನಾಡು ಉತ್ಸವವೆಂದು ಇನ್ನಷ್ಟು ವ್ಯವಸ್ಥಿತವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು. ಅದರಲ್ಲಿ ನಮ್ಮ ಜಿಲ್ಲೆಯ ಸಂಸ್ಕೃತಿ, ಕಲೆ ಇತ್ಯಾದಿಗಳನ್ನು ಅನಾವರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭೆ ಅಧ್ಯಕ್ಷೆ ಬಿ.ಶೀಲಾ ದಿನೇಶ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ತೋಟಗಾರಿಕೆ ಜಂಟಿ ನಿರ್ದೇಶಕಿ ಮಂಗಳ ಮತ್ತಿತರ ಅಧಿಕಾರಿಗಳು ಇದ್ದರು.
Chaitrotsava flower display attracts attention
Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...