Home namma chikmagalur chikamagalur ‘ಚೈತ್ರೋತ್ಸವ ಫಲಪುಷ್ಪ ಪ್ರದರ್ಶನ-2026’
chikamagalurHomeLatest Newsnamma chikmagalur

‘ಚೈತ್ರೋತ್ಸವ ಫಲಪುಷ್ಪ ಪ್ರದರ್ಶನ-2026’

Share
Share

ಚಿಕ್ಕಮಗಳೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರು ಈ ವರ್ಷದ ‘ಚೈತ್ರೋತ್ಸವ ಫಲಪುಷ್ಪ ಪ್ರದರ್ಶನ’ದ ಪೋಸ್ಟರ್‌ಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಈ ಸೌಂದರ್ಯದ ಹಬ್ಬದ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದು, ಜಿಲ್ಲೆಯ ಜನತೆಗೆ ಸ್ವಾಗತ ಕೋರಿದ್ದಾರೆ.

ಕಾಫಿನಾಡಿನ ಜನರಿಗೆ ಗಣರಾಜ್ಯೋತ್ಸವದ ಸಂಭ್ರಮಕ್ಕೆ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಜನವರಿ 26 ರಿಂದ 28 ರವರೆಗೆ ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ‘ಚೈತ್ರೋತ್ಸವ ಫಲಪುಷ್ಪ ಪ್ರದರ್ಶನ-2026’ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಅವರು ಜನವರಿ 26 ರಂದು ಬೆಳಗ್ಗೆ 10:00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿಯ ಪ್ರದರ್ಶನದ ಹೈಲೈಟ್ ಎಂದರೆ ಹೂವುಗಳಿಂದ ಸಿದ್ಧವಾಗಲಿರುವ ‘ಭದ್ರಬಾಲ್ಯ’ ಮತ್ತು ‘ನಾಡಲೋಕ’ ಕಲಾಕೃತಿಗಳು. ಇದರೊಂದಿಗೆ ಮಹಿಳಾ ವಿಶ್ವಕಪ್ ಕ್ರಿಕೆಟ್ ತಂಡದ ಮಾದರಿ, ಶಾರದಾಂಬೆ ಮೂರ್ತಿ ಹಾಗೂ ಸಾಲುಮರದ ತಿಮ್ಮಕ್ಕ ಅವರ ಪ್ರತಿಕೃತಿಗಳು ಹೂವು ಮತ್ತು ಸಿರಿಧಾನ್ಯಗಳ ಅಲಂಕಾರದಲ್ಲಿ ಕಣ್ಮನ ಸೆಳೆಯಲಿವೆ.

ಸುಮಾರು 8000ಕ್ಕೂ ಹೆಚ್ಚು ಹೂಕುಂಡಗಳ ಜೋಡಣೆ, ಕಾಫಿ ಬೆಳೆಯ ವಿಶೇಷ ಅರ್ಚ್ ಈ ಬಾರಿ ಪ್ರದರ್ಶನದ ಅಂದವನ್ನು ಹೆಚ್ಚಿಸಲಿವೆ. ಕೇವಲ ಹೂವುಗಳಷ್ಟೇ ಅಲ್ಲದೆ, ಪ್ರಾಣಿ-ಪಕ್ಷಿಗಳ ತರಕಾರಿ ಕೆತ್ತನೆಗಳು, ಅಪರೂಪದ ಹಣ್ಣು-ತರಕಾರಿಗಳ ಪ್ರದರ್ಶನ ಹಾಗೂ ಮಲೆನಾಡು-ಕರಾವಳಿಯ ಪುರಾತನ ನಾಣ್ಯಗಳ ಸಂಗ್ರಹವೂ ಇಲ್ಲಿರಲಿದೆ. ಇಲಾಖೆಗಳ ವತಿಯಿಂದ ಅಲಂಕಾರಿಕ ಮೀನುಗಳ ಪ್ರದರ್ಶನ ಮತ್ತು ರೇಷ್ಮೆ ಹುಳುವಿನ ಜೀವನ ಚಕ್ರದ ಬಗ್ಗೆ ಮಾಹಿತಿ ನೀಡುವ ಮಳಿಗೆಗಳನ್ನು ತೆರೆಯಲಾಗುತ್ತಿದೆ.

ಪೋಸ್ಟ‌ರ್ ಬಿಡುಗಡೆ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾ‌ರ್ ದಯಾಮ ಹಾಗೂ ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕಿ ಮಂಗಳ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗಾಗಿ ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಮೋಹನ್ ಸೇರಿದಂತೆ ವಿವಿಧ ಇಲಾಖೆಯ ಗಣ್ಯರು ಭಾಗವಹಿಸಿ ತಮ್ಮ ಸಹಕಾರದ ಭರವಸೆ ನೀಡಿದರು.

‘Chaitrotsava Flower Exhibition-2026’

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...