Home namma chikmagalur chikamagalur ಜಿಲ್ಲೆಯಲ್ಲಿಂದು ಮುಖ್ಯಮಂತ್ರಿ ಪ್ರವಾಸ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿಂದು ಮುಖ್ಯಮಂತ್ರಿ ಪ್ರವಾಸ

Share
Share

ಚಿಕ್ಕಮಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆಪ್ಟೆಂಬರ್ ೧೯ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ ೧೯ ರಂದು ಮಧ್ಯಾಹ್ನ ೧ ಗಂಟೆಗೆ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಮಖ್ಯಮಂತ್ರಿಗಳು ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಪಟ್ಟಂತೆ ಸಭೆ ನಡೆಸುವರು.

ಅನಂತರ ಮಧ್ಯಾಹ್ನ ೩ ಗಂಟೆಗೆ ರಂಭಾಪುರಿ ಮಠದ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಣ್ಯ ಸಚಿವರ ಪ್ರವಾಸ: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ಸೆಪ್ಟೆಂಬರ್ ೧೯ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಧ್ಯಾಹ್ನ ೧ ಗಂಟೆಗೆ ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಹೆಲಿಕ್ಯಾಪ್ಟರ್‌ನಲ್ಲಿ ಆಗಮಿಸಲಿರುವ ಸಚಿವರು, ಅನಂತರ ಕಸ್ತೂರಿ ರಂಗನ್ ವರದಿಗೆ ಸಂಬಂಧಪಟ್ಟಂತೆ ನಡೆಯುವ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ ೩ ಗಂಟೆಗೆ ಮಠದ ಆವರಣದ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Chief Minister’s tour of the district today

Share

Leave a comment

Leave a Reply

Your email address will not be published. Required fields are marked *

Don't Miss

ಏಡ್ಸ್ ಭಾದಿತ ವ್ಯಕ್ತಿ ಎಲ್ಲರಂತೆ ಜೀವಿಸಬಹುದು

ಚಿಕ್ಕಮಗಳೂರು:  ಹೆಚ್‌ಐವಿ ಸೋಂಕಿತ ವ್ಯಕ್ತಿಗೆ ಸಾವು ಬಿಟ್ಟರೆ ಬೇರೆ ಯಾವುದೇ ಮಾರ್ಗವಿರ ಲಿಲ್ಲ. ಆದರೆ ಇದೀಗ ವೈದ್ಯಕೀಯ ಸಂಶೋಧನೆಗಳ ಫಲವಾಗಿ ಸೋಂಕಿನ ವ್ಯಕ್ತಿ, ಸಂಪೂರ್ಣ ಕಾಯಿಲೆ ಯಿಂದ ಮುಕ್ತರಾಗದಿದ್ದರೂ ಎಲ್ಲರಂತೆ ದೀರ್ಘಕಾಲ...

ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಆಗ್ರಹಿಸಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು:  ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ನಗರದ ಕೆನರಾ ಬ್ಯಾಂಕ್ ಮುಖ್ಯ ಕಚೇರಿ ಆವರಣದಲ್ಲಿ ಶುಕ್ರವಾರ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯು ಕ್ತ ವೇದಿಕೆ ಜಿಲ್ಲಾ ಸಮಿತಿಯಿಂದ...

Related Articles

ಕಾಫಿ ಉದ್ಯಮ ಉಳಿಸಲು ಸಂಘಟಿತ ಹೋರಾಟ ಅಗತ್ಯ

ಚಿಕ್ಕಮಗಳೂರು: ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಹೆಚ್ಚಳ, ಮಾರುಕಟ್ಟೆ...

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ...

ಜನಾಭಿಪ್ರಾಯ ಆಲಿಸಲು ಸಿಎಂ ಆಗಮನ ಜನಪರ ಕಾಳಜಿಯ ಸಾಕ್ಷಿ

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಕುರಿತು ಜನಸಾಮಾನ್ಯರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಲಿಸಲು...