ಚಿಕ್ಕಮಗಳೂರು : ಸೌದಿ ಅರೇಬಿಯಾದ ಮೆಕ್ಕಾದಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದ ಕನ್ನಡಿಗರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೌದಿ ಅರೇಬಿಯಾದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಮೆಕ್ಕಾ ಮತ್ತು ಮದೀನಾಗೆ ತೆರಳಿರುವ ಉಮಾ ಯಾತ್ರಿಕರು ಹಾಗೂ ಕನ್ನಡಿಗರು ವಾಪಸ್ ಬಾರದೆ ಪರದಾಡುವಂತಾಗಿದೆ.
ಚಿಕ್ಕಮಗಳೂರಿನ ಉದ್ಯಮಿ ಅಪ್ಪರ್ ಹಿಂದೂಸ್ಥಾನಿ ಅವರು ಕೂಡ ಸೌದಿಯಲ್ಲಿ ಸಿಲುಕಿದ್ದು, ಅಲ್ಲಿನ ಪರಿಸ್ಥಿತಿ ಹಾಗೂ ವಿಮಾನಗಳ ರದ್ದತಿಯಿಂದ ಯಾತ್ರಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿ, ಕೂಡಲೇ ನೆರವಿಗೆ ಧಾವಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಯಾತ್ರಿಕರು ತವರಿಗೆ ಮರಳಲು ವಿಮಾನಗಳಿಲ್ಲದೆ ತೊಂದರೆ ಅನುಭವಿಸುವಂತಾಗಿದ್ದು ನಿಯಮಿತ ವಿಮಾನ ಸೇವೆಗಳು ಸ್ಥಗಿತಗೊಂಡಿದ್ದು, ಯಾತ್ರಿಕರು ಅಲ್ಲಿಯೇ ಉಳಿದುಕೊಳ್ಳುವಂತಾಗಿದ್ದು.
ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತಾಗಿ ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವಂತೆ ಹಾಗೂ ಕೂಡಲೇ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.
Chikkamagaluru businessman stranded in Mecca
Leave a comment