ಚಿಕ್ಕಮಗಳೂರು : ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್ ವಿಕೋಪಕ್ಕೆ ತಿರುಗಿದೆ ನಗರದ ಕೆಲವೆಡೆ ಅಹಿತಕರ ಘಟನೆಗಳು ನಡೆದಿದ್ದು. ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ನಗರದ ಹೊರವಲಯದ ರಾಂಪುರ ಸರ್ಕಲ್ ನಲ್ಲಿ ಬೈಕ್ ಗೆ ಬಿಜೆಪಿ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ. ಮತ್ತೊಂದೆಡೆ ನಗರದ ಎಂ.ಜಿ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ ಈ ವೇಳೆ ವರ್ತಕರೊಬ್ಬರು ಅಂಗಡಿ ಮುಚ್ಚಲು ವಿರೋಧ ವ್ಯಕ್ತಪಡಿಸಿದ್ದಾರೆ. ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ನಗರದ ವಿವಿಧೆಡೆ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ನಗರದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಕಾರ್ಯಕರ್ತರು ಮುಖಕ್ಕೆ ಕಪ್ಪು ಪಟ್ಟಿ ಕಟ್ಟಿಕೊಂಡು ಸಿ.ಟಿ ರವಿ ಭಾವಚಿತ್ರವನ್ನು ಹಿಡಿದು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ, ನಗರದ ಆಜಾದ್ ಪಾರ್ಕ್ ನ ಮಯೂರ ಹೋಟೆಲ್ ಬಳಿ ಘಟನೆ ನಡೆದಿದ್ದು,
ಮುಖಾಮುಖಿಯಾದ ಎರಡೂ ಕಡೆಯ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಆಜಾದ್ ವೃತ್ತದಲ್ಲಿ ಸಿ.ಟಿ ರವಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕೈ ಪಡೆ
ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ವೇಳೆ ಸಿ.ಟಿ ರವಿ ವಿರುದ್ಧ ಅವಾಚ್ಯ ಪದ ಬಳಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವ ಮೋರ್ಚಾ ಕಾರ್ಯದರ್ಶಿ ಸಚಿನ್ ಕುಮಾರ್ ಮೇಲೆ ಹಲ್ಲೆ ನಡೆದಿದೆ. ಮನಸ್ಸೊ ಇಚ್ಚೆ ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದರು. ಅಟ್ಟಾಡಿಸಿಕೊಂಡು ಹೋಗಿ ಕಾಂಗ್ರೆಸಿಗರು ಕಾರ್ಯಕರ್ತರು ಹಲ್ಲೆ ನಡೆಸಿದರು.
Leave a comment