Home namma chikmagalur chikamagalur ‘ಪ್ರೇಮದ ಊರಲ್ಲಿ’ ಚಿತ್ರತಂಡಕ್ಕೆ ಚಿಕ್ಕಮಗಳೂರಿನ ಸನ್ಮಾನ
chikamagalurHomeLatest Newsnamma chikmagalur

‘ಪ್ರೇಮದ ಊರಲ್ಲಿ’ ಚಿತ್ರತಂಡಕ್ಕೆ ಚಿಕ್ಕಮಗಳೂರಿನ ಸನ್ಮಾನ

Share
Share

ಚಿಕ್ಕಮಗಳೂರು: ರೈತರ ಬದುಕು, ಕೃಷಿಕರ ಸಂಕಷ್ಟ ಹಾಗೂ ಗ್ರಾಮೀಣ ಬದುಕಿನ ಭಾವನೆಗಳನ್ನು ತೆರೆಮೇಲೆ ಕಟ್ಟಿಕೊಟ್ಟಿರುವ ‘ಪ್ರೇಮದ ಊರಲ್ಲಿ’ ಕನ್ನಡ ಚಲನಚಿತ್ರವು ಯಶಸ್ವಿಯಾಗಿ 25 ದಿನಗಳ ಪ್ರದರ್ಶನ ಪೂರೈಸಿದ್ದು, ಚಿತ್ರತಂಡಕ್ಕೆ ಸೋಮವಾರ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಆತ್ಮೀಯ ಸನ್ಮಾನ ಸಲ್ಲಿಸಲಾಯಿತು.

ಚಿಕ್ಕಮಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರವನ್ನು ನಿರ್ದೇಶಕ ಮನೋಜ್ ಕುಮಾರ್ ನಿರ್ದೇಶಿಸಿದ್ದು, ಶ್ರೀರಾಮ ನಾಯಕನಾಗಿ ಅಭಿನಯಿಸಿದ್ದಾರೆ. ದೇವೇಂದ್ರ ಅವರು ಚಿತ್ರವನ್ನು ನಿರ್ಮಿಸಿದ್ದು, ಇಬ್ಬರು ನಾಯಕಿಯರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ರಾಜ್ಯದಲ್ಲಿ ಜನಮನ್ನಣೆ ಗಳಿಸಿರುವ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ಐಸಿರಿ ಫೌಂಡೇಷನ್ ವತಿಯಿಂದ ಚಿತ್ರತಂಡವನ್ನು ಆಹ್ವಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಚಿಕ್ಕಮಗಳೂರಿನ ನೆಲದಲ್ಲಿ ಚಿತ್ರೀಕರಣಗೊಂಡು ರೈತರ ಬದುಕಿನ ಸಂದೇಶವನ್ನು ಸಾರುತ್ತಿರುವ ಚಿತ್ರ ಯಶಸ್ಸು ಸಾಧಿಸಿರುವುದು ಸಂತಸದ ಸಂಗತಿ ಎಂದರು.

ಕನ್ನಡ ಚಿತ್ರರಂಗದಲ್ಲಿ ಡಾ. ರಾಜ್‌ಕುಮಾರ್ ಅವರ ಚಿತ್ರಗಳು ಕೇವಲ ಮನರಂಜನೆಗೆ ಸೀಮಿತವಾಗಿರದೆ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದ್ದವು. ಅದರಲ್ಲೂ ರೈತರ ಬದುಕಿನ ಮಹತ್ವವನ್ನು ಸಾರಿದ ‘ಬಂಗಾರದ ಮನುಷ್ಯ’ ಚಿತ್ರ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಅದೇ ರೀತಿಯಲ್ಲಿ ರೈತರ ಬದುಕು ಮತ್ತು ಕೃಷಿಕರ ಮಹತ್ವವನ್ನು ಸಾರುವ ಚಿತ್ರಗಳು ಇಂದಿನ ಸಮಾಜಕ್ಕೂ ಅಗತ್ಯವಾಗಿವೆ ಎಂದು ಅಭಿಪ್ರಾಯಪಟ್ಟರು.

‘ಪ್ರೇಮದ ಊರಲ್ಲಿ’ ಚಿತ್ರತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಉತ್ತಮ ಸಂದೇಶ ಸಾರುವ ಚಿತ್ರಗಳನ್ನು ಜನರಿಗೆ ಪರಿಚಯಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದರು.

ಚಿತ್ರದ ನಾಯಕ ಶ್ರೀರಾಮ ಮಾತನಾಡಿ, “ಬೆಳ್ಳಿಪರದೆಯ ಮೇಲೆ ಕಾಣಿಸಿಕೊಳ್ಳಬೇಕು ಎಂಬುದು ನನ್ನ ಬಹುದಿನಗಳ ಕನಸಾಗಿತ್ತು. ಆ ಕನಸನ್ನು ನನಸು ಮಾಡಿದ ನಿರ್ದೇಶಕ ಮನೋಜ್ ಕುಮಾರ್ ಅವರು ಚಿಕ್ಕಮಗಳೂರಿನವರೇ ಆಗಿರುವುದು ನನಗೆ ಹೆಮ್ಮೆಯ ಸಂಗತಿ. ಚಿತ್ರಕ್ಕೆ ಬಂಡವಾಳ ಹೂಡಿದ ನಿರ್ಮಾಪಕ ದೇವೇಂದ್ರ ಅವರಿಗೆ ನಾನು ಸದಾ ಕೃತಜ್ಞನಾಗಿರುತ್ತೇನೆ” ಎಂದು ಹೇಳಿದರು.

“ಇಂದು ಇಷ್ಟೊಂದು ಜನರ ಮುಂದೆ ನಿಂತು ಮಾತನಾಡುವ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಈ ವೇದಿಕೆ ನನಗೆ ಭಾವನಾತ್ಮಕವಾಗಿ ಬಹಳ ವಿಶೇಷವಾಗಿದೆ. ಸುಮಾರು 35 ವರ್ಷಗಳ ಹಿಂದೆ ನನ್ನ ತಂದೆ-ತಾಯಿ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ವಾಸವಾಗಿದ್ದರಂತೆ. ಇಂದು ಅದೇ ಊರಿನೊಂದಿಗೆ ನನ್ನ ಚಿತ್ರದ ಯಶಸ್ಸಿನ ಸಂಭ್ರಮ ಹಂಚಿಕೊಳ್ಳುತ್ತಿರುವುದು ವಿಶೇಷ ಅನುಭವ ನೀಡಿದೆ” ಎಂದರು.

ಚಿತ್ರಕ್ಕೆ ಪ್ರೀತಿ ಮತ್ತು ಪ್ರೋತ್ಸಾಹ ನೀಡಿದ ಚಿಕ್ಕಮಗಳೂರಿನ ಜನತೆಗೆ ಕೃತಜ್ಞತೆ ಸಲ್ಲಿಸಿದ ಅವರು, ಕನ್ನಡ ಚಿತ್ರವೊಂದನ್ನು ಈ ಮಟ್ಟಕ್ಕೆ ಬೆಳೆಸಿರುವ ಪ್ರೇಕ್ಷಕರ ಬೆಂಬಲವೇ ಚಿತ್ರತಂಡದ ದೊಡ್ಡ ಶಕ್ತಿ ಎಂದು ತಿಳಿಸಿದರು.

ಚಿತ್ರದ ನಟ ಪ್ರಶಾಂತ್ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯೊಂದಿಗೆ ತಮ್ಮ ಕುಟುಂಬದ ಆತ್ಮೀಯ ಸಂಬಂಧವಿದೆ. ತಮ್ಮ ತಾಯಿ ಹಾಗೂ ಸಂಬಂಧಿಕರ ಊರಿನೊಂದಿಗೆ ನಂಟು ಹೊಂದಿರುವುದರಿಂದ ಈ ಭಾಗದ ಜನರ ಪ್ರೀತಿ ತಮಗೆ ವಿಶೇಷ ಸಂತಸ ನೀಡಿದೆ ಎಂದರು.

“ಈ ಚಿತ್ರ ಯಶಸ್ಸು ಕಂಡಿರುವುದು ನಮ್ಮಿಂದ ಮಾತ್ರವಲ್ಲ, ಪ್ರೇಕ್ಷಕರ ಪ್ರೀತಿ ಮತ್ತು ಬೆಂಬಲದಿಂದ. ಇದು ನಮ್ಮ ಚಿತ್ರವಷ್ಟೇ ಅಲ್ಲ, ನಿಮ್ಮೆಲ್ಲರ ಚಿತ್ರ. ಚಿಕ್ಕಮಗಳೂರಿನ ಜನರು ತೋರಿಸಿರುವ ಪ್ರೀತಿ ಸದಾ ಹೀಗೆಯೇ ಇರಲಿ. ಉತ್ತಮ ಚಿತ್ರಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಕನ್ನಡ ಚಿತ್ರರಂಗವನ್ನು ಬೆಳೆಸಬೇಕು” ಎಂದು ಮನವಿ ಮಾಡಿದರು.

ಚಿತ್ರದ ಯಶಸ್ಸಿನ ಆರಂಭದ ದಿನಗಳಲ್ಲೇ ಚಿಕ್ಕಮಗಳೂರಿನ ಅಭಿಮಾನಿಗಳು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದನ್ನು ಸ್ಮರಿಸಿದ ಅವರು, ಚಿತ್ರತಂಡವನ್ನು ಊರಿಗೆ ಆಹ್ವಾನಿಸಿ ಸನ್ಮಾನಿಸುವ ಮೂಲಕ ಪ್ರೋತ್ಸಾಹ ನೀಡಿರುವ ಶಾಸಕ ಎಚ್.ಡಿ. ತಮ್ಮಯ್ಯ ಹಾಗೂ ಐಸಿರಿ ಫೌಂಡೇಷನ್‌ಗೆ ಧನ್ಯವಾದ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಚಿತ್ರತಂಡದ ನಿರ್ಮಾಪಕರು, ನಾಯಕ-ನಾಯಕಿಯರು, ನಿರ್ದೇಶಕರು ಹಾಗೂ ಪ್ರಮುಖ ಕಲಾವಿದರನ್ನು ಐಸಿರಿ ಫೌಂಡೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಐಸಿರಿ ಫೌಂಡೇಷನ್ ಅಧ್ಯಕ್ಷ ರೋಹನ್ ಭಾರ್ಗವಪುರಿ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ತನೂಜ್ ನಾಯ್ಡು, ಮುಖಂಡರಾದ ಭರತ್ ಮತ್ತಿತರರು ಉಪಸ್ಥಿತರಿದ್ದರು.

Chikmagalur’s honor for the film crew of ‘Premada Oorali’

Share

Leave a comment

Leave a Reply

Your email address will not be published. Required fields are marked *

Don't Miss

ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆ

ಕಡೂರು: ಕರ್ನಾಟಕ ಜಾನಪದ ಅಕಾಡೆಮಿಯ 2026-27ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಕಡೂರು ತಾಲ್ಲೂಕು ಬೀರೂರು ಹೋಬಳಿ ಬಿಸಿಲೆರೆ ಸಮೀಪದ ಅರೇಹಳ್ಳಿ ಗ್ರಾಮದ ಅಂಧ ಕಲಾವಿದ ಡಿ.ರಾಮಪ್ಪ ಆಯ್ಕೆಯಾಗಿದ್ದಾರೆ. ಹುಟ್ಟಿನಿಂದಲೇ ಅಂಧರಾಗಿದ್ದರು...

ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯವಕ ಆತ್ಮಹತ್ಯೆ

ಚಿಕ್ಕಮಗಳೂರು: ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯುವಕನೊಬ್ಬ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ಸಿ.ಎಸ್. ಯೋಗೀಶ್ ಮೃತ ದುರ್ದೈವಿ....

Related Articles

ಮಕ್ಕಳ ಲೈಂಗಿಕ ಶೋಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ – ಪ್ರಕರಣ ದಾಖಲು

ಚಿಕ್ಕಮಗಳೂರು: ಅಪ್ರಾಪ್ತ ವಯಸ್ಸಿನ ಮಗು ಮತ್ತು ವಯಸ್ಕರು ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ತೋರಿಸುವ ವಿಡಿಯೋವನ್ನು ಸಾಮಾಜಿಕ...

ಹಿಟ್‌ ಆ್ಯಂಡ್‌ ರನ್‌-ಸವಾರ ಸಾವು

ಕಡೂರು: ಹಿಂಬದಿಯಿಂದ ಬಂದ ಅಪರಿಚಿತ ಗೂಡ್ಸ್ ವಾಹನದ ಚಾಲಕನೊಬ್ಬ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ...

ಚಿಕ್ಕಮಗಳೂರಿನಲ್ಲಿ ಕ್ರೈಸ್ತ ಸಮುದಾಯದ ಬೃಹತ್ ಫಲಾನುಭವಿ ಸಮಾವೇಶ

ಚಿಕ್ಕಮಗಳೂರು: ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಅಕ್ಟೋಬರ್ 28ರಂದು ಚಿಕ್ಕಮಗಳೂರು ನಗರದಲ್ಲಿ ಕ್ರೈಸ್ತ...

ಜಿಲ್ಲೆಯಲ್ಲಿ ಮತದಾರರ ಅಂತಿಮ ಪಟ್ಟಿಯಿಂದ 85,769 ಹೆಸರು ಹೊರಕ್ಕೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತದಾರರ ಅಂತಿಮ ಪಟ್ಟಿಯನ್ನು ಮಂಗಳವಾರ...