Home namma chikmagalur chikamagalur ಮಕ್ಕಳ ಲೈಂಗಿಕ ಶೋಷಣೆ ಪ್ರಕರಣ ದಾಖಲು
chikamagalurHomeLatest Newsnamma chikmagalur

ಮಕ್ಕಳ ಲೈಂಗಿಕ ಶೋಷಣೆ ಪ್ರಕರಣ ದಾಖಲು

Share
Share

ಚಿಕ್ಕಮಗಳೂರು:  ಮಕ್ಕಳ ಲೈಂಗಿಕ ಶೋಷಣೆ ಮತ್ತು ನಿಂದನೆಗೆ ಸಂಬಂಧಿಸಿದ (CSEAM) ವಿಡಿಯೋವನ್ನು ಸಾಮಾಜಿಕ ಜಾಲತಾಣ ಸ್ನಾಪ್‌ಚಾಟ್ ಮೂಲಕ ಹಂಚಿಕೊಂಡ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, National Center for Missing and Exploited Children (NCMEC) ನಿಂದ ಬಂದ Cyber Tipline Report ಆಧರಿಸಿ ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ. NCRP ಪೋರ್ಟಲ್‌ನಲ್ಲಿ ಲಭ್ಯವಿದ್ದ ವರದಿ ಹಾಗೂ ವಿಡಿಯೋ ಪರಿಶೀಲಿಸಿದಾಗ ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಡೌನ್‌ಲೋಡ್ ಅಥವಾ ಹಂಚಿಕೊಂಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಚಿಕ್ಕಮಗಳೂರಿನ ಟಿಪ್ಪುನಗರ ನಿವಾಸಿಯೊಬ್ಬರ ವಿರುದ್ಧ ಶಂಕೆ ವ್ಯಕ್ತವಾಗಿದ್ದು, ಆರೋಪಿತನು ಸ್ನಾಪ್‌ಚಾಟ್ ಮೂಲಕ CSEAM ವಿಡಿಯೋವನ್ನು ಹಂಚಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ ಸುಮಾರು ಒಂದು ನಿಮಿಷದ ವಿಡಿಯೋದಲ್ಲಿ ಅಪ್ರಾಪ್ತ ಮಗುವಿನೊಂದಿಗೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ದೃಶ್ಯಗಳಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 41/2026ರಡಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಕಲಂ 67B ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Child sexual abuse case registered

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...