ಚಿಕ್ಕಮಗಳೂರು: ವಿದ್ಯಾರ್ಥಿದೆಸೆಯಲ್ಲಿ ಮಕ್ಕಳು ಪುಸ್ತಕ ಸ್ನೇಹಿಗಳಾಗಬೇಕು. ಭವಿ ಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಗ್ರಂಥಾಲಯಗಳಲ್ಲಿ ದೊರೆಯುವ ಪುಸ್ತಕ ಗಳನ್ನು ಬದುಕಿಗೆ ಹೊಸಮಾರ್ಗ ನೀಡಲಿದೆ ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಹೇಳಿದರು.
ನಗರದ ಹೊಸಮನೆ ಬಡಾವಣೆ ಸಮೀಪದ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಸಾರ್ವಜನಿಕ ಗ್ರಂ ಥಾಲಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ಧ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಸಾರ್ವಜನಿಕರ ಓದಿಗಾಗಿ ಗುಣಮಟ್ಟದ ಗ್ರಂಥಾಲ ಯ ಕಟ್ಟಡ ಸೇರಿದಂತೆ ಸ್ವಚ್ಚಂಧ ವಾತಾವರಣ ನಿರ್ಮಾಣ ಮಾಡಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ದೇಶದ ಖ್ಯಾತ ವ್ಯಕ್ತಿಗಳ ಜೀವನಚರಿತ್ರೆ ಹಾಗೂ ಉನ್ನತ ವಿದ್ಯಾಭ್ಯಾಸಕ್ಕಾಗಿ ಎಲ್ಲಾ ರೀತಿಯ ಪು ಸ್ತಕಗಳನ್ನು ಅಡಕಗೊಳಿಸಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಗ್ರಂಥಾಲಯಕ್ಕೆ ಅವಶ್ಯಕತೆ ಇರುವ ಮೂಲಸವಲತ್ತನ್ನು ಪ್ರಾಮಾಣಿಕವಾಗಿ ಒದ ಗಿಸಲಾಗುವುದು ಎಂದು ಭರವಸೆ ನೀಡಿದ ಅವರು, ದೇಶದ ಮುಂದಿನ ಯುವಪ್ರಜೆಗಳನ್ನು ಸಮಾಜದ ಮುಂಚೂಣಿಗೆ ಕೊಂಡೊಯ್ಯುವುದೇ ಪ್ರಮುಖ ಧ್ಯೇಯ ಎಂದು ಹೇಳಿದರು.
ಹಿರಿಯ ಸಾಹಿತಿ ಬಿ.ತಿಪ್ಪೇರುದ್ರಪ್ಪ ಮಾತನಾಡಿ ಗ್ರಂಥಾಲಯಗಳು ಜ್ಞಾನವನ್ನು ಉಣಬಡಿಸುವ ಕೇಂದ್ರ ಗಳು. ಕನಿಷ್ಟ ದಿನದ ಒಂದುಗಂಟೆಗಳ ಕಾಲ ಬಿಡುವು ಮಾಡಿಕೊಂಡು ಗ್ರಂಥಾಲಯಕ್ಕೆ ತೆರಳಿ ದಿನಪತ್ರಿಕೆ, ಪುಸ್ತಕಗಳು ಓದುವ ಅಭ್ಯಾಸಿವಿರಬೇಕು. ಇದು ಸಮಾಜದ ಆಗು-ಹೋಗುಗಳನ್ನು ಸಮಗ್ರವಾಗಿ ತಿಳಿದು ಕೊಳ್ಳಲು ಸಾಧ್ಯ ಎಂದು ತಿಳಿಸಿದರು.
ನಗರ ಕೇಂದ್ರ ಗ್ರಂಥಾಲಯಾಧಿಕಾರಿ ಜಿ.ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನಿಂದ ನ.೨೦ ರವರೆಗೆ ಸಪ್ತಾಹ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ, ಚಿತ್ರಕಲೆ ಸ್ಪರ್ಧೆ ಹಾಗೂ ಗ್ರಂಥಾಲಯ ಮಹತ್ವ ಕುರಿತು ಉಪನ್ಯಾಸ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗು ವುದು ಎಂದು ಹೇಳಿದರು.
ನಗರಸಭೆ ಸದಸ್ಯೆ ಸುಜಾತ ಶಿವಕುಮಾರ್ ಮಾತನಾಡಿ ವಿದ್ಯಾಕ್ಷೇತ್ರದಲ್ಲಿ ಪುಸ್ತಕಗಳು ಮಕ್ಕಳ ತಲೆ ಎತ್ತು ವಂತೆ ಮಾಡಲಿದ್ದು, ಹೆಚ್ಚು ಮೊಬೈಲ್‌ಗಳ ಚಟಕ್ಕೆ ಬಲಿಯಾಗದೇ, ನಿರಂತರ ಕಲಿಕೆಯತ್ತ ಅಭ್ಯಾಸ ಹೊಂದಿ, ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾ ನಾಯ್ಕ್, ಸ್ಪರ್ಧಾತ್ಮಕ ತರಬೇತಿ ಸಂಸ್ಥೆ ಮುಖ್ಯಸ್ಥ ತುಳಸಿದಾಸ್, ಗ್ರಂಥಾಲಯ ಸಿಬ್ಬಂದಿಗಳಾದ ರಾಘವೇಂದ್ರ, ರೂಪ, ಶಂಕರೇಗೌಡ, ಸಿದ್ದೇಗೌಡ, ಸೌಮ್ಯ, ಕೃಪ, ಕೆ.ಬಿ.ವೀಣಾ, ಓದಿಗರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು..
Children become book-friendly in student life
Leave a comment