Home namma chikmagalur ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸ ಬೇಕು
namma chikmagalurchikamagalurHomeLatest News

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸ ಬೇಕು

Share
Share

ಚಿಕ್ಕಮಗಳೂರು:  ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಕಲಿಸದಿದ್ದರೆ ಏನಾಗುತ್ತದೆ ಎಂಬುವುದಕ್ಕೆ ಇತ್ತೀಚೆಗೆ ದೆಹಲಿಯಲ್ಲಿ ನಡೆದ ವಿದ್ವಂಸಕ ಕೃತ್ಯವೇ ನಿದರ್ಶನ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ನಗರದ ಸಂಜೀವಿನಿ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಜೀವವನ್ನು ಉಳಿಸಬೇಕಾದ ವೈದ್ಯರೇ ದೆಹಲಿಯಲ್ಲಿ ವಿದ್ವಂಸಕ ಕೃತ್ಯವನ್ನು ನಡೆಸುವ ಮೂಲಕ ಜನರ ಪ್ರಾಣ ತೆಗೆಯುವ ಕೆಲಸ ಮಾಡಿದ್ದಾರೆ, ಇದಕ್ಕೆ ಮೂಲ ಕಾರಣ ಆ ವೈದ್ಯರುಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸದಿರುವುದು ಎಂದ ಸ್ವಾಮೀಜಿ ವಿದ್ಯಾವಂತರೇ ವಿದ್ವಂಸಕ ಕೃತ್ಯಗಳನ್ನು ನಡೆಸಿದರೆ ಅವರು ಕಲಿತ ವಿದ್ಯೆಗೆ ಏನು ಬೆಲೆ ಬಂತು ಎಂದು ವಿಷಾದಿಸಿದ ಸ್ವಾಮೀಜಿ, ಸಂಸ್ಕಾರವಿಲ್ಲದ ವಿದ್ಯೆ, ಸಂಸ್ಕಾರ ನೀಡದ ಶಿಕ್ಷಣದಿಂದ ಹೀಗಾಗುತ್ತದೆ ಎಂದು ತಿಳಿಸಿದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸದಿರುವುದರಿಂದಾಗಿ ಅವರು ಸಮಾಜಘಾತಕರಾಗಿ ಬೆಳೆಯುತ್ತಿದ್ದಾರೆ, ವಿದ್ಯಾವಂತರೇ ವಿದ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದಾರೆ,ಅಪರಾಧಗಳಲ್ಲಿ ಭಾಗಿಯಾಗುತ್ತಿದ್ದಾರೆ ಇದರಿಂದಾಗಿ ದೇಶದಲ್ಲಿ ಅಪರಾಧಗಳ ದಿನೇ ದಿನೇ ಸಂಖ್ಯೆ ಹೆಚ್ಚುತ್ತಿದೆ ಎಂದು ವಿಷಾದಿಸಿದರು.

ಜನತೆ ರಾಕ್ಷಸರಾಗಬಾರದು, ಸಾಕ್ಷರರಾಗಬೇಕು, ರಾಷ್ಟ್ರಭಕ್ತಿ, ದೇಶಪ್ರೇಮ, ಪ್ರೀತಿ, ಪ್ರೇಮ, ಸ್ನೇಹ, ವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕು, ನಾವು ಕಲಿತ ವಿದ್ಯೆ ಸಮಾಜಕ್ಕೆ, ದೇಶಕ್ಕೆ ಉಪಯೋಗವಾಗಬೇಕು, ಕಂಟಕವಾಗಬಾರದು ಎಂದು ಕಿವಿ ಮಾತು ಹೇಳಿದರು.

ಮಕ್ಕಳೇ ಈ ದೇಶದ ಭವಿಷ್ಯ, ಅವರೇ ಮುಂದೆ ರಾಷ್ಟ್ರವನ್ನು ಮುನ್ನಡೆಸಬೇಕಾದವರು, ಅವರಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸುವುದು ಅತ್ಯಗತ್ಯ, ಸಂಸ್ಕಾರವನ್ನು ಕಲಿಸಿದ ಶಿಕ್ಷಣ ವ್ಯರ್ಥ, ಎಂದು ಬಲವಾಗಿ ಪ್ರತಿಪಾದಿಸಿದ ಸ್ವಾಮೀಜಿ ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಬೇಕು, ಅವರಲ್ಲಿ ರಾಷ್ಟ್ರಭಕ್ತಿ, ದೇಶಪ್ರೇಮವನ್ನು ಬೆಳೆಸಬೇಕು ಎಂದು ಹೇಳಿದರು.

ಸಂಜೀವಿನಿ ವಿದ್ಯಾ ಸಂಸ್ಥೆ ಖಾಸಗೀ ಸಂಸ್ಥೆ, ಆದರೆ ವ್ಯಾಪಾರಿ ಸಂಸ್ಥೆಯಲ್ಲ, ೪೩ ವರ್ಷಗಳಿಂದ ವಿದ್ಯಾದಾನ ಮಾಡುತ್ತಿರುವ ಈ ಸಂಸ್ಥೆ, ಸುವರ್ಣ ಮಹೋತ್ಸವದ ಹೊತ್ತಿಗೆ ಇನ್ನಷ್ಟು ಬೆಳೆಯಲಿ ಎಂದು ಆಶೀರ್ವದಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ ವಿದ್ಯಾಸಂಸ್ಥೆಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಕಲಿಸಬೇಕು, ಅವರನ್ನು ಬರೀ ಅಂಕಗಳಿಸುವ ಯಂತ್ರಗಳನ್ನಾಗಿಸದೆ ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು, ಬದುಕನ್ನು, ಸಮಸ್ಯೆ ಮತ್ತು ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿ ಎದುರಿಸುವ ಮನೋಭಾವವನ್ನು ಬೆಳೆಸಬೇಕು ಎಂದು ಕಿವಿ ಮಾತು ಹೇಳಿದರು.

ಮಕ್ಕಳನ್ನು ಬರೀ ಅಂಕಗಳಿಸುವ ಯಂತ್ರಗಳನ್ನಾಗಿಸಿದರೆ ಅವರು ಫಸ್ಟ್ ರಾಂಕ್ ರಾಜು ಸಿನಿಮಾದ ಹೀರೋ ತರ ಸಾಮಾನ್ಯ ಜ್ಞಾನವಿಲ್ಲದವರಂತಾಗುತ್ತಾರೆ ಎಂದು ಎಚ್ಚರಿಸಿದ ಅವರು ಹಾಗಾಗಿ ಮಕ್ಕಳಿಗೆ ಸಾಮಾನ್ಯ ಜ್ಞಾನವನ್ನೂ ಕಲಿಸಬೇಕು ಎಂದು ಸಲಹೆ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷೆ ಎಸ್. ಶಾಂತಕುಮಾರಿ ೧೯೮೨ ರಲ್ಲಿ ಆರಂಭಗೊಂಡ ಸಂಜೀವಿನಿ ವಿದ್ಯಾ ಸಂಸ್ಥೆ ಕಳೆದ ೪೩ ವರ್ಷಗಳಿಂದ ನಿರಂತರವಾಗಿ ವಿದ್ಯಾ ದಾನ ಮಾಡುತ್ತಿದೆ, ದಾನಿಗಳ ನೆರವು ಮತ್ತು ಸಹಕಾರದಿಂದ ಸಂಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮರಾಜು ಮಾತನಾಡಿದರು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಯಿತು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಸಂಸ್ಥೆಯ ಚಿಗುರು ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸಂಜೀವಿನಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪಿ. ಕೆ. ಶ್ರೀಕಾಂತ್, ಕಾರ್ಯದರ್ಶಿ ಎಂ.ಪಿ. ಉಡುಪ, ಖಜಾಂಚಿ ಗೋಪಿನಾಥ್, ಆಡಳಿತ ಮಂಡಳಿ ಸದಸ್ಯರಾದ ಲೀಲಾಧರ್ ಪಟೇಲ್ ಗೋಪಿನಾಥ್ ಆಡಳಿತ, ಸುಮಂತ್, ಮಲ್ಲಿಕಾರ್ಜುನ ರಾವ್, ರಂಗನಾಥ್, ಸಿದ್ದಲಿಂಗೇಶ್ವರ, ಪ್ರಾಂಶುಪಾಲೆ ಎಸ್.ಆರ್. ಹೇಮ, ಮುಖ್ಯ ಶಿಕ್ಷಕಿ ಕುಮುದ ಎಂ ಕಿಣಿ, ವಿದ್ಯಾರ್ಥಿಗಳಾದ ವೈ. ಎಸ್. ಸೇವಂತಿಕ, ಡಿ. ಎ,ವರಲಕ್ಷ್ಮಿ, ಕೆ.ಆರ್. ಧನ್ಯಶ್ರೀಉಪಸ್ಥಿತರಿದ್ದರು.

Children need to be taught manners along with education.

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...