Home namma chikmagalur chikamagalur ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?
chikamagalurHomeLatest Newsnamma chikmagalur

ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?

Share
Share

ಚಿಕ್ಕಮಗಳೂರು: ಕಾಫಿನಾಡಿನ ತುಡುಕೂರು ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ತಡರಾತ್ರಿ ನಡೆದ ಮಕ್ಕಳ ಗಲಾಟೆ ಸದ್ಯ ದೊಡ್ಡ ಆತಂಕಕ್ಕೆ ಕಾರಣವಾಗಿದೆ.

ಶಾಲೆಯಲ್ಲಿ ಮಕ್ಕಳ ನಡುವೆ ಉಂಟಾದ ಜಗಳದಿಂದ ತೀವ್ರ ಭಯಗೊಂಡ ಉತ್ತರ ಕರ್ನಾಟಕ ಮೂಲದ ನಾಲ್ವರು ಪುಟ್ಟ ಮಕ್ಕಳು, ಅಲ್ಲಿಂದ ಹೇಗಾದರೂ ಮಾಡಿ ತಪ್ಪಿಸಿಕೊಂಡು ತಮ್ಮ ಊರಿಗೆ ಸೇರಲು ತೀರ್ಮಾನಿಸಿ ಇಂದು ಬೆಳ್ಳಂಬೆಳಗ್ಗೆಯೇ ವಸತಿ ಶಾಲೆಯಿಂದ ಯಾರಿಗೂ ತಿಳಿಸದಂತೆ ಹೊರಬಂದು ಚಿಕ್ಕಮಗಳೂರು ರಸ್ತೆಯ ಕಡೆಗೆ ಹೆಜ್ಜೆ ಹಾಕಿದ್ದಾರೆ.

ವಸತಿ ಶಾಲೆಯಿಂದ ಸುಮಾರು 2 ಕಿಲೋಮೀಟರ್ ದೂರದವರೆಗೆ ಈ ಪುಟ್ಟ ಮಕ್ಕಳು ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರಿಗೆ ತಕ್ಷಣವೇ ಅನುಮಾನ ಮೂಡಿದೆ.

ಮಕ್ಕಳನ್ನು ತಡೆದು ಪ್ರೀತಿಯಿಂದ ವಿಚಾರಿಸಿದಾಗ, ಶಾಲೆಯಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಅಸಲಿ ವಿಷಯ ಬೆಳಕಿಗೆ ಬಂದಿದೆ. ತದನಂತರ ಗ್ರಾಮಸ್ಥರು ಆ ನಾಲ್ವರೂ ಮಕ್ಕಳನ್ನು ಅತ್ಯಂತ ಸುರಕ್ಷಿತವಾಗಿ ಮರಳಿ ವಸತಿ ಶಾಲೆಗೆ ತಲುಪಿಸುವ ಮೂಲಕ ಎದುರಾಗಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ಈ ಇಡೀ ಘಟನೆಯು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಈ ವಸತಿ ಶಾಲೆಯ ಅಧಿಕಾರಿಗಳು, ವಾರ್ಡನ್ ಹಾಗೂ ಸಿಬ್ಬಂದಿಯ ಬೇಜವಾಬ್ದಾರಿತನವನ್ನು ಎತ್ತಿ ತೋರಿಸಿದೆ. ರಾತ್ರಿ ಮಕ್ಕಳ ನಡುವೆ ಗಲಾಟೆಯಾಗಿ, ಮುಂಜಾನೆ ನಾಲ್ವರು ಮಕ್ಕಳು ಶಾಲೆಯ ಆವರಣ ಬಿಟ್ಟು ಅಷ್ಟು ದೂರ ಹೋದರೂ ವಾರ್ಡನ್ ಸೇರಿದಂತೆ ಯಾರೊಬ್ಬರ ಗಮನಕ್ಕೂ ಬಾರದಿರುವುದು ಆತಂಕಕ್ಕೆ ಕಾರಣವಾಗಿದ್ದು, ಆಡಳಿತ ಮಂಡಳಿಯ ಸಂಪೂರ್ಣ ನಿರ್ಲಕ್ಷ್ಯ ಎದ್ದು ತೋರಿಸಿದೆ.

Children who ran away from residential school…?

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...