Home namma chikmagalur chikamagalur ಗಾಂಜಾ ಪೆಡ್ಲರ್ ಹೆಡೆಮುರಿ ಕಟ್ಟಿದ ನಗರ ಪೊಲೀಸರು
chikamagalurCrime NewsHomeLatest Newsnamma chikmagalur

ಗಾಂಜಾ ಪೆಡ್ಲರ್ ಹೆಡೆಮುರಿ ಕಟ್ಟಿದ ನಗರ ಪೊಲೀಸರು

Share
Share

ಚಿಕ್ಕಮಗಳೂರು: ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಗಾಂಜಾ ಪೆಡ್ಲರ್ ನನ್ನು ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಎಐಟಿ ಕಾಲೇಜು ಮುಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಸಣ್ಣ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಧನರಾಜ್ ಟಿ.ಎಂ. ಅವರು ತಮ್ಮ ಸಿಬ್ಬಂದಿಯೊಂದಿಗೆ ವಿಶೇಷ ಕಾರ್ಯಾಚರಣೆ ಕೈಗೊಂಡು.

ಬಾತ್ಮಿದಾರರಿಂದ ಬಂದ ಖಚಿತ ಸುಳಿವಿನ ಮೇರೆಗೆ ಕಾಲೇಜು ಮುಂಭಾಗದ ನಿಗದಿತ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ, ಗಾಂಜಾ ಮಾರಾಟದ ದಂಧೆಯಲ್ಲಿ ನಿರತನಾಗಿದ್ದ ಆಸಾಮಿಯನ್ನು ಸುತ್ತುವರಿದು ವಶಕ್ಕೆ ಪಡೆದಿದೆ. ಯುವ ಪೀಳಿಗೆಯನ್ನು ಮಾದಕ ವ್ಯಸನದ ಕೂಪಕ್ಕೆ ತಳ್ಳುತ್ತಿದ್ದ ಆರೋಪಿಯ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ (NDPS) ನಗರ ಪೊಲೀಸ್ ಠಾಣೆಯಲ್ಲಿ ಗಂಭೀರ ಮೊಕದ್ದಮೆ ಹೂಡಲಾಗಿದ್ದು, ಜಾಲದ ಹಿಂದಿರುವ ಇತರೆ ಕಿಂಗ್‌ಪಿನ್‌ಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ.

City police arrest marijuana peddler

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...