Home namma chikmagalur chikamagalur ಮೂಡಿಗೆರೆ ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳ ಬಡಿದಾಟ
chikamagalurCrime NewsHomeLatest Newsnamma chikmagalur

ಮೂಡಿಗೆರೆ ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳ ಬಡಿದಾಟ

Share
Share

ಮೂಡಿಗೆರೆ: ಸರ್ಕಾರಿ ಗೋಮಾಳ ಭೂಮಿ ಒತ್ತುವರಿ ವಿವಾದವೊಂದು ಭುಗಿಲೆದ್ದಿದ್ದು, ತಾಲೂಕು ಆಡಳಿತ ಸೌಧದಲ್ಲಿ ಎರಡು ಗುಂಪುಗಳು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಪರಿಸ್ಥಿತಿ ವಿಕೋಪಕ್ಕೆ ಹೋದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.

ತಾಲೂಕಿನ ತ್ರಿಪುರ ಗ್ರಾಮದ ಸರ್ವೇ ನಂಬರ್ 53ರಲ್ಲಿರುವ ಬರೋಬ್ಬರಿ 4 ಎಕರೆ ಸರ್ಕಾರಿ ಜಾಗವನ್ನು ಗ್ರಾಮದ ರತೀಶ್ ಎಂಬುವವರು ಅಕ್ರಮವಾಗಿ ಟ್ರಂಚ್ ಹೊಡೆದು, ಗಿಡ ನೆಟ್ಟು ಕಬಳಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು.

ಮಕ್ಕಳ ಶಾಲಾ ಆಟದ ಮೈದಾನ ಹಾಗೂ ಸಾರ್ವಜನಿಕ ಬಳಕೆಗೆ ಮೀಸಲಿದ್ದ ಜಾಗ ಅನ್ಯರ ಪಾಲಾಗುತ್ತಿದೆ ಎಂದು ಸಿಡಿದೆದ್ದ ಗ್ರಾಮಸ್ಥರ ಆಕ್ರೋಶಕ್ಕೆ ಸ್ಪಂದಿಸಿದ ತಹಶೀಲ್ದಾರ್ ಅಶ್ವಿನಿ, ಆರೋಪಿ ರತೀಶ್ ಅವರನ್ನು ಕಚೇರಿಗೆ ಕರೆಸಿ ತೀವ್ರ ತರಾಟೆಗೆ ತೆಗೆದುಕೊಂಡರು. ಒತ್ತುವರಿಯನ್ನು ತಕ್ಷಣ ತೆರವುಗೊಳಿಸಲು ಖಡಕ್ ಆದೇಶ ನೀಡಿದಾಗ, ತಾನೇ ಸ್ವತಃ ತೆರವು ಮಾಡುವುದಾಗಿ ಒಪ್ಪಿಕೊಂಡ ರತೀಶ್ ಎರಡು ದಿನಗಳ ಕಾಲಾವಕಾಶ ಕೇಳಿ ಮುಚ್ಚಳಿಕೆ ಪತ್ರ ಬರೆದುಕೊಟ್ಟರು.

ಆದರೆ, ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪರಿಸ್ಥಿತಿ ಕ್ಷಣಾರ್ಧದಲ್ಲಿ ರಣಾಂಗಣವಾಗಿ ಮಾರ್ಪಟ್ಟಿತು. ಎರಡೂ ಗುಂಪುಗಳ ನಡುವೆ ಜಗಳ ತಾರಕಕ್ಕೇರಿ ಮಾರಾಮಾರಿಗೆ ಮುಂದಾಗುತ್ತಿದ್ದಂತೆ, ಮೂಡಿಗೆರೆ ಪಿಎಸ್‌ಐ ಹರ್ಷವರ್ಧನ್ ತಕ್ಷಣ ಮಧ್ಯಪ್ರವೇಶಿಸಿ ಉದ್ರಿಕ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟರು.

ಗ್ರಾಮಸ್ಥರು ಜಾಗವನ್ನು ಸಾರ್ವಜನಿಕ ಹಿತಾಸಕ್ತಿಗೇ ಉಳಿಸಿಕೊಳ್ಳಲು ಪಟ್ಟುಹಿಡಿದಿದ್ದು ತಹಶೀಲ್ದಾರ್ ನೀಡಿದ ಗಡುವಿನಲ್ಲಿ ಗೋಮಾಳ ಜಾಗ ನಿಜಕ್ಕೂ ಒತ್ತುವರಿ ಮುಕ್ತವಾಗಲಿದೆಯೇ ಎಂಬ ಕುತೂಹಲ ಸ್ಥಳೀಯರಲ್ಲಿ ಮನೆಮಾಡಿದೆ.

Clash between two groups at the Mudigere Taluk Administrative Complex.

Share

Leave a comment

Leave a Reply

Your email address will not be published. Required fields are marked *

Don't Miss

ಪೌರಕಾರ್ಮಿಕರು ಒಳಚರಂಡಿ ಮ್ಯಾನ್‌ಹೋಲ್‌ಗೆ ಇಳಿಯಬಾರದು

ಚಿಕ್ಕಮಗಳೂರು : ನಗರಸಭೆಯ ಯುಜಿಡಿ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಸುರಕ್ಷತಾ ನಿಯಮಗಳ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ನಗರಸಭೆ ಆಯುಕ್ತ ಬಸವರಾಜ್ ಯಾವುದೇ ಕಾರಣಕ್ಕೂ ಪೌರಕಾರ್ಮಿಕರು ಒಳಚರಂಡಿ ಮ್ಯಾನ್‌ಹೋಲ್‌ಗೆ...

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಯಮವೇ ಅಸ್ತ್ರ

ಚಿಕ್ಕಮಗಳೂರು : ಯುವಜನರು ಮಾದಕವಸ್ತು ಹಾಗೂ ಇತರ ದುಶ್ಚಟಗಳಿಂದ ದೂರವಿದ್ದು, ಸಂಯಮ ಮತ್ತು ಶಿಸ್ತಿನ ಜೀವನವನ್ನು ಅಳವಡಿಸಿಕೊಳ್ಳುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಭವಂರ್ ಸಿಂಗ್ ಮೀನಾ...

Related Articles

ಜಿ.ಪಂ-ತಾ.ಪಂ ಚುನಾವಣೆ ಪೈಪೋಟಿ ಕಷ್ಟ -ಕಷ್ಟ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯುವುದು ಬಹುತೇಕ ಖಚಿತ. ಈಗಾಗಲೇ ಮೀಸಲಾತಿ ಪ್ರಕಟಿಸಲಾಗಿದೆ.ಕಳೆದ...

16 ವರ್ಷಗಳ ಹಿಂದೆ ಶೃಂಗೇರಿಯಲ್ಲಿ ಕಾಣೆಯಾದ ಪುತ್ರನ ಪತ್ತೆಗೆ ತಂದೆಯಿಂದ ದೂರು

ಶೃಂಗೇರಿ:  ಸುಮಾರು 16 ವರ್ಷಗಳ ಹಿಂದೆ ಶೃಂಗೇರಿಯಲ್ಲಿ ಕಾಣೆಯಾಗಿದ್ದ ಪುತ್ರನನ್ನು ಪತ್ತೆಹಚ್ಚಿಕೊಡುವಂತೆ ಕೋರಿ ತಂದೆಯೊಬ್ಬರು ಶೃಂಗೇರಿ...

ಪ್ರಧಾನಮಂತ್ರಿ ಕುಸುಮ್ ಯೋಜನೆ ಹೆಸರಿನಲ್ಲಿ ₹3 ಲಕ್ಷ ವಂಚನೆ

ಕಳಸ:  ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿ 3 ಎಚ್‌ಪಿ ಸೋಲಾರ್ ಪಂಪ್‌ಸೆಟ್ ಕೊಡಿಸುವುದಾಗಿ ನಂಬಿಸಿ, ನಕಲಿ ದಾಖಲೆಗಳನ್ನು...

ವೃದ್ಧೆಯ ಮನೆಗೆ ನುಗ್ಗಿ ಚಾಕು ತೋರಿಸಿ ಚಿನ್ನಾಭರಣ, ಬೆಳ್ಳಿ ವಸ್ತುಗಳ ದರೋಡೆ

ಚಿಕ್ಕಮಗಳೂರು: ಮನೆಯೊಂದರಲ್ಲಿ ಒಬ್ಬರೇ ವಾಸವಿದ್ದ ಮಹಿಳೆಯನ್ನು ಚಾಕು ತೋರಿಸಿ ಬೆದರಿಸಿದ ಇಬ್ಬರು ಅಪರಿಚಿತರು, ಅಪಾರ ಪ್ರಮಾಣದ...