Home namma chikmagalur chikamagalur ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಗಲಾಟೆ
chikamagalurCrime NewsHomeLatest Newsnamma chikmagalur

ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಗಲಾಟೆ

Share
Share

ಚಿಕ್ಕಮಗಳೂರು: ನಗರದ ರಾಮನಹಳ್ಳಿ ಸಮೀಪದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಜೈಲು ಅಧೀಕ್ಷಕಿ ಹಾಗೂ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.

ಕಾರಾಗೃಹದ ಬ್ಯಾರಕ್ ಸಂಖ್ಯೆ 1ರಲ್ಲಿ ರಾತ್ರಿ ಊಟದ ಸಮಯದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಗಲಾಟೆ ಆರಂಭವಾಗಿದೆ. ಈ ವೇಳೆ ಪರಿಸ್ಥಿತಿ ತಿಳಿಗೊಳಿಸಲು ಹಾಗೂ ಬ್ಯಾರಕ್ ಒಳಗೆ ತಪಾಸಣೆ ನಡೆಸಲು ತೆರಳಿದ ಜೈಲು ಅಧೀಕ್ಷಕಿ ದೀಪಾ ಮತ್ತು ಸಿಬ್ಬಂದಿಗೆ ಕೈದಿಗಳು ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಜೈಲು ಅಧೀಕ್ಷಕಿ ದೀಪಾ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಹ್ಮದ್ ಖಾನ್, ಅಸ್ಪಾನ್ ಇರ್ಷಾದ್ ಅಹ್ಮದ್, ಹರ್ಷಿತ್ ಹಾಗೂ ಅವಿನಾಶ್ ದೊಂಡ್ರೇ ಪ್ರಕರಣದ ಆರೋಪಿಗಳಾಗಿದ್ದಾರೆ. ಇವರು ದರೋಡೆ, ಕೊಲೆ ಯತ್ನ ಹಾಗೂ ಪೋಕ್ಸೋ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಬಂಧಿತರಾಗಿ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿ ಇರಿಸಿಕೊಂಡಿದ್ದಾರೆ.

ರಾತ್ರಿ ಊಟದ ವೇಳೆ ಕೈದಿಗಳ ನಡುವೆ ಆರಂಭವಾದ ಗಲಾಟೆ ಜೈಲು ಸಿಬ್ಬಂದಿಯೊಂದಿಗೆ ವಾಗ್ವಾದ ಹಾಗೂ ಜೀವ ಬೆದರಿಕೆ ಹಂತಕ್ಕೆ ತಲುಪಿದೆ. ಜೈಲಿನ ಭದ್ರತೆ ಮತ್ತು ಸಿಬ್ಬಂದಿಯ ಸುರಕ್ಷತೆಯ ದೃಷ್ಟಿಯಿಂದ ಈ ಘಟನೆ ಮಹತ್ವ ಪಡೆದುಕೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Clash between undertrial prisoners in the district jail

Share

Leave a comment

Leave a Reply

Your email address will not be published. Required fields are marked *

Don't Miss

ವಕೀಲರ ರಕ್ಷಣೆಗೆ ಆಗ್ರಹ: ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

ಚಿಕ್ಕಮಗಳೂರು, ನ.3: ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆ ಹಾಗೂ ಮಾರಣಾಂತಿಕ ದಾಳಿಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಮತ್ತು ಹಲ್ಲೆ ನಡೆಸುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು...

ಹಳೆಯ ದ್ವೇಷಕ್ಕೆ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಹಳೆಯ ಗಲಾಟೆ ಹಾಗೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಬಿದಿರಿನ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವವನ್ನು ಗೋಣಿಚೀಲದಲ್ಲಿ ಹಾಕಿ ಕೆರೆಯಲ್ಲಿ ಹೂತುಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ...

Related Articles

ಅಲ್ಪಸಂಖ್ಯಾತ ಯುವಕರಿಗೆ ಸೈನಿಕ ತರಬೇತಿಗೆ ಸಿ.ಟಿ. ರವಿ ವಿರೋಧ

ಚಿಕ್ಕಮಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು 6,000ಕ್ಕೂ ಹೆಚ್ಚು ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಸೈನಿಕ...

ದೀಪಾವಳಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಯುವತಿ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ ತಂದೆ-ಮಗಳು ಬೈಕ್ ಅಪಘಾತಕ್ಕೀಡಾಗಿ, ಮಗಳು...

ಬೈಕ್ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧ ಸಾವು

ಚಿಕ್ಕಮಗಳೂರು: ವೇಗವಾಗಿ ಬಂದ ಬೈಕ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರಿಗೆ ಹಿಂದಿನಿಂದ ಡಿಕ್ಕಿ ಹೊಡೆದ...

ಮತ್ತಿಕಟ್ಟೆ–ಬಿ. ಹೊಸಹಳ್ಳಿ ರಸ್ತೆ ಅಭಿವೃದ್ಧಿಗೆ ₹2.5 ಕೋಟಿ ಅನುದಾನ

ಮೂಡಿಗೆರೆ: ಹಲವು ವರ್ಷಗಳಿಂದ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದ ಮತ್ತಿಕಟ್ಟೆ–ಬಿ. ಹೊಸಹಳ್ಳಿ ಸಂಪರ್ಕ ರಸ್ತೆಗೆ...