Home namma chikmagalur chikamagalur ಬಂಗಾರದ ಆಭರಣ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ
chikamagalurHomeLatest Newsnamma chikmagalur

ಬಂಗಾರದ ಆಭರಣ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ

Share
Share

ಕಡೂರು: ಬಂಗಾರದ ಆಭರಣಗಳ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪರಸ್ಪರ ಹಲ್ಲೆ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿರುವ ಘಟನೆ ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆ.9ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಸಂಬಂಧ ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಮೊದಲ ಪ್ರಕರಣದಲ್ಲಿ, ಶಿಕ್ಷಕ ವೃತ್ತಿಯಲ್ಲಿರುವ ಮಹಿಳೆಯೊಬ್ಬರು ನೀಡಿದ ದೂರಿನಂತೆ, ಅವರ ತಮ್ಮ ಕೆ.ಆರ್. ವಿಜಯಕುಮಾರ್ ಹಾಗೂ ಅವರ ಪತ್ನಿ ಆಶಾ ಮನೆ ಬಳಿ ಬಂದು ಬಂಗಾರದ ಒಡವೆಗಳನ್ನು ಬಿಡಿಸಿಕೊಂಡ ವಿಚಾರದಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ. ಆಶಾ ಅವರು ದೂರುದಾರರಿಗೆ ಕೈಯಿಂದ ಹಲ್ಲೆ ಮಾಡಿದ್ದು, ವಿಜಯಕುಮಾರ್ ಅವರು ದೂರುದಾರರ ಪತಿ ಮೂರ್ತಿ ಅವರಿಗೆ ದೊಣ್ಣೆಯಿಂದ ಹೊಡೆದು, ಬಳಿಕ ಮುಷ್ಟಿಯಿಂದ ಬಾಯಿಗೆ ಗುದ್ದಿ ಹಲ್ಲಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರುದಾರರ ಮಗ ದರ್ಶನ್‌ಗೂ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಾಯಗೊಂಡ ಮೂರ್ತಿ ಹಾಗೂ ದರ್ಶನ್ ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಬಳಿಕ ದೂರು ನೀಡಲಾಗಿದೆ. ಈ ಸಂಬಂಧ ಸಿಂಗಟಗೆರೆ ಠಾಣೆ ಮೊ.ನಂ.39/2026ರಲ್ಲಿ ಬಿಎನ್‌ಎಸ್‌ನ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಪ್ರತಿಯಾಗಿ ದಾಖಲಾಗಿರುವ ಕೌಂಟರ್ ಪ್ರಕರಣದಲ್ಲಿ, ವಿಜಯಕುಮಾರ್ ಅವರ ಪತ್ನಿ ಆಶಾ ಅವರು ನೀಡಿದ ದೂರಿನಂತೆ, ಕೋವಿಡ್ ಸಮಯದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸುಮಾರು 250ರಿಂದ 300 ಗ್ರಾಂ ಬಂಗಾರದ ಆಭರಣಗಳನ್ನು ₹7.50 ಲಕ್ಷಕ್ಕೆ ಬೆಂಗಳೂರಿನ ಮುತ್ತೂಟ್ ಹಾಗೂ ಮಣಪ್ಪುರಂ ಫೈನಾನ್ಸ್‌ನಲ್ಲಿ ಅಡವಿಟ್ಟಿದ್ದರು. ಬಳಿಕ ಮೂರ್ತಿ ಹಾಗೂ ರೇಣುಕಮ್ಮ ಅವರು ಹಣ ನೀಡಿ ಆಭರಣಗಳನ್ನು ಬಿಡಿಸಿಕೊಂಡಿದ್ದರು ಎನ್ನಲಾಗಿದೆ.

ಆಭರಣಗಳನ್ನು ಮೂರು–ನಾಲ್ಕು ವರ್ಷಗಳ ಬಳಿಕ ವಾಪಸ್ ಪಡೆಯುವುದಾಗಿ ಹೇಳಿದ್ದರೂ, ಆ.9ರಂದು ಈ ವಿಚಾರವಾಗಿ ಕೇಳಲು ಹೋದಾಗ ಮೂರ್ತಿ ಹಾಗೂ ರೇಣುಕಮ್ಮ ಅವರು ಆಭರಣಗಳನ್ನು ಮಾರಾಟ ಮಾಡಿದ್ದು, ತಮ್ಮ ಬಳಿ ಬಂಗಾರ ಇಲ್ಲ ಎಂದು ತಿಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ವೇಳೆ ಮೂರ್ತಿ, ರೇಣುಕಮ್ಮ, ದರ್ಶನ್ ಹಾಗೂ ನಿರಂಜನ್ ಸೇರಿಕೊಂಡು ತಮಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದರ್ಶನ್ ಸಿಮೆಂಟ್ ಶೀಟ್ ತುಂಡಿನಿಂದ ತಲೆ, ಹಣೆ ಹಾಗೂ ಬೆನ್ನಿಗೆ ಹೊಡೆದಿದ್ದು, ನಿರಂಜನ್ ಸೈಕಲ್ ಪಂಪ್‌ನಿಂದ ಬೆನ್ನು ಮತ್ತು ಸೊಂಟಕ್ಕೆ ಹೊಡೆದಿದ್ದಾರೆ. ರೇಣುಕಮ್ಮ ದೊಣ್ಣೆಯಿಂದ ತಲೆಗೆ ಹೊಡೆದಿದ್ದು, ಮೂರ್ತಿ ಕೂಡ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಎಲ್ಲರೂ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಗಾಯಗೊಂಡ ಮಹಿಳೆಯನ್ನು ಪತಿ ವಿಜಯಕುಮಾರ್ ಕಡೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಈ ಸಂಬಂಧ ಸಿಂಗಟಗೆರೆ ಠಾಣೆ ಮೊ.ನಂ.40/2026ರಲ್ಲಿ ಬಿಎನ್‌ಎಸ್‌ನ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.

ಬಂಗಾರದ ಆಭರಣಗಳ ವಿಚಾರಕ್ಕೆ ಸಂಬಂಧಿಸಿದ ಹಣಕಾಸಿನ ವಿವಾದವೇ ಎರಡು ಕುಟುಂಬಗಳ ನಡುವಿನ ಗಲಾಟೆಗೆ ಕಾರಣವಾಗಿದೆ ಎನ್ನಲಾಗಿದ್ದು, ಪ್ರಕರಣಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Clashes between two families over gold jewelry

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...