Home namma chikmagalur chikamagalur ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ
chikamagalurHomeLatest Newsnamma chikmagalur

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

Share
Share

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರತ್ನಗಿರಿ ರಸ್ತೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಎರಡು ಗುಂಪುಗಳ ನಡುವೆ ರಸ್ತೆಯಲ್ಲೇ ದೊಡ್ಡ ಮಟ್ಟದ ಹೊಡೆದಾಟ ಹಾಗೂ ಗಲಾಟೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಪೊಲೀಸರಿಗೆ ಮಾಹಿತಿ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಇಲಾಖೆಯ ಜೀಪ್‌ನಲ್ಲಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡೊಡನೆ ಗಲಾಟೆ ಮಾಡುತ್ತಿದ್ದ ಪುಂಡರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಜಾಗರೂಕತೆಯಿಂದ ಸುತ್ತುವರೆದು ಗೌರಿಕಾಲುವೆ ನಿವಾಸಿಗಳಾದ ಮನೋಜ್, ಉಮೇಶ್ ಹಾಗೂ ಚಂದನ್ ಎಂಬ ಮೂವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ.

ಪೊಲೀಸರ ಕೈಗೆ ಸಿಗದೆ ಗಿರೀಶ್, ದೀಕ್ಷಿತ್ ಸೇರಿದಂತೆ ಇತರರು ಕಾಲ್ಕಿತ್ತಿದ್ದಾರೆ. ನಡುರಸ್ತೆಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿ ನೆಮ್ಮದಿಗೆ ಶಾಂತಿಭಂಗ ಉಂಟುಮಾಡಿದ ಹಿನ್ನೆಲೆಯಲ್ಲಿ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Clashes between two groups in the city

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...