Home namma chikmagalur ಚಾರ್ಮಾಡಿ ಘಾಟಿಯಲ್ಲಿ ಸ್ವಚ್ಛತಾ ಅಭಿಯಾನ‌
namma chikmagalurchikamagalurHomeLatest News

ಚಾರ್ಮಾಡಿ ಘಾಟಿಯಲ್ಲಿ ಸ್ವಚ್ಛತಾ ಅಭಿಯಾನ‌

Share
Share

ಮೂಡಿಗೆರೆ: ಬಣಕಲ್‌ ಬಾಲಿಕಾ ಮರಿಯಾ ದೇವಾಲಯ ಹಾಗೂ ಕ್ರೈಸ್ತರ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಸ್ವಚ್ಛತಾ ಅಭಿಯಾನ‌ ನಡೆಸಿ, ರಸ್ತೆ ಬದಿ ಬಿದ್ದಿದ್ದ ಕಸ ತೆರವುಗೊಳಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧರ್ಮಗುರು ಲಾರೆನ್ಸ್ ಪ್ರೇಮ್ ಡಿಸೋಜ ಮಾತನಾಡಿ, ‘ಪ್ರಕೃತಿ ಇದ್ದರೆ ಮಾತ್ರ ಜೀವಿಗಳು ಉಳಿಯಲು ಸಾಧ್ಯ. ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದರು.

ಕ್ರೈಸ್ತರ ಅಭಿವೃದ್ಧಿ ಸಂಘದ ಅಧ್ಯಕ್ಷ ಪೆಡ್ಡಿ ಲೋಬೊ ಮಾತನಾಡಿ, ‘ರಸ್ತೆ ಬದಿ ಕಸ ಎಸೆಯುವ ಪ್ರವೃತ್ತಿಯನ್ನು ಕೈ ಬಿಡಬೇಕು.‌ ಸಾರ್ವಜನಿಕ ಆಸ್ತಿಗಳ ರಕ್ಷಣೆ ಮಾಡುವ ಕೆಲಸವಾಗಬೇಕು. ಚಾರ್ಮಾಡಿ ಘಾಟಿಯಲ್ಲಿ ವರ್ಷದಲ್ಲಿ ನಾಲ್ಕೈದು ಬಾರಿ ಕಸ‌ ತೆರವುಗೊಳಿಸಿ ದರೂ ಮತ್ತೆ ಮತ್ತೆ ಸಂಗ್ರಹವಾಗುತ್ತಿರುವುದು ಪ್ರಜ್ಞಾವಂತರೇ ಕಸ ಎಸೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ’ ಎಂದರು.

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೇಲ್ವಿನ್ ಲಸ್ರಾದೊ ಮಾತನಾಡಿ, ರಸ್ತೆ ಬದಿ ಎಸೆಯುವ ಕಸವು ಪ್ರಕೃತಿಯ ಮಡಿಲು ಸೇರುತ್ತದೆ. ಮಳೆಗಾಲದಲ್ಲಿ ಕಸದಲ್ಲಿದ್ದ ಮಲಿನಕಾರಿ ವಸ್ತುಗಳು ನೀರಿನಲ್ಲಿ ಸೇರುವುದರಿಂದ ಜಲಚರಗಳಿಗೂ ಹಾನಿಯಾಗುತ್ತದೆ. ಎಲ್ಲ ಕಾರ್ಯಗಳ ನಿರ್ವಹಣೆಯು ಸರ್ಕಾರದ ಹೊಣೆ ಎಂದು ಭಾವಿಸದೇ ಸಂಘ–ಸಂಸ್ಥೆಗಳು ಸೇವಾ ಕಾರ್ಯದಲ್ಲಿ ತೊಡಗಿದರೆ ಉತ್ತಮ ಪರಿಸರ ನಿರ್ಮಿಸಬಹುದು ಎಂದರು.

ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ನಜರೆತ್ ಶಾಲೆಯ ಶಿಕ್ಷಕರು, ಚರ್ಚ್‌ನ ಭಕ್ತರು ಭಾಗವಹಿಸಿದ್ದರು.

Cleanliness campaign at Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....