ಚಿಕ್ಕಮಗಳೂರು: ವ್ಯಾಟ್ಸಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಂಡ ಬಳಿಕ ಬ್ಯಾಂಕ್ ಖಾತೆಯಲ್ಲಿದ್ದ ೧೦.೪೯ ಲಕ್ಷ ರೂ. ಕಳೆದುಕೊಂಡ ಘಟನೆ ನೆಡೆದಿದ್ದು, ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಮಾ.೨೦ರಂದು ವ್ಯಕ್ತಿಯೊಬ್ಬರಿಗೆ ವ್ಯಾಟ್ಸಪ್ ಗ್ರೂಪ್‌ನಲ್ಲಿ ಪಿ.ಎಂ.ಕಿಸಾನ್ ಯೋಜನಾ. ಎಪಿಕೆ ಎಂಬ ಹೆಸರಿನಲ್ಲಿ ಪೋಸ್ಟ್ ಲಿಂಕ್ ಮಾಡಲಾಗಿದ್ದು, ಲಿಂಕ್ ಡೌನ್ ಲೋಡ್ ಮಾಡಿದ ಕೂಡಲೇ ವ್ಯಕ್ತಿಯ ಗಮನಕ್ಕೆ ಬರುವಷ್ಟರಲ್ಲಿ ಕೆನರಾಬ್ಯಾಂಕ್ ಖಾತೆಯಲ್ಲಿದ್ದ ೧೦.೪೯ಲಕ್ಷ ರೂ. ಕಡಿತಗೊಂಡಿದೆ.
ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾ.೨೨ರಂದು ವಂಚನೆ ಪ್ರಕರಣ ದಾಖಲಾಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಎಪಿಕೆ( ಆಂಡ್ರಾಯ್ಡ್ ಪ್ಯಾಕೇಜ್ ) ಫೈಲ್ ವಂಚನೆಗಳು ಆಂಡ್ರಾಯ್ಡ್ ಮೊಬೈಲ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಮೋಸ ಮಾಡಲಾಗುತ್ತಿದೆ.
ಆದುದರಿಂದ ವಾಟ್ಸಪ್ ಫೇಸ್ ಬುಕ್ ಮೆಸೆಂಜರ್, ಟೆಲಿಗ್ರಾಂ ಸೇರಿ ಸಾಮಾಜಿಕ ಜಾಲತಾಣದಲ್ಲಿ ಬರುವ ಈ ರೀತಿಯ ಎಪಿಕೆ ಫೈಲ್‌ಗಳನ್ನು ಡೌನ್ ಲೋಡ್ ಮಾಡಿಕೊಳ್ಳದಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವ ಜನಿಕರಲ್ಲಿ ವಿನಂತಿಸಿದೆ.
Clicking on a link on WhatsApp – Rs. 10.49 lakh stolen
Leave a comment