ಚಿಕ್ಕಮಗಳೂರು: ಚಿಕ್ಕಮಗಳೂರಿನ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಕೆ.ಎನ್. ಪ್ರವೀಣ್ ಅವರು ಈ ಬಾರಿಯ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಈ ಬಾರಿ ಕೆ.ಎನ್.ಪ್ರವೀಣ್ ಆವರನ್ನು ಸಿಎಂ ಪದಕಕ್ಕೆ ಆಯ್ಕೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ಅವಘಟಗಳ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ನಡೆಸಿರುವುದು, ಕಾಡ್ಗಿಚ್ಚು ತಡೆಯುವ ನಿಟ್ಟಿನಲ್ಲಿ ಅತ್ಯುತ್ತಮ ಸೇವೆ, ದೇವಿರಮ್ಮ ಜಾತ್ರೆ ಸಂದರ್ಭದಲ್ಲಿ ಭಕ್ತರ ರಕ್ಷಣೆ ಮಾಡಿರುವುದು ಸೇರಿದಂತೆ ಅತ್ಯತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಸಿಎಂ ಪದಕಕ್ಕೆ ಪ್ರವೀಣ್ ಆಯ್ಕೆಯಾಗಿದ್ದಾರೆ.
CM Medal for District Fire Officer
Leave a comment